ADVERTISEMENT

ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು: ಸಚಿವ ಸುಧಾಕರ್

ಮಾಗಡಿ ರಸ್ತೆ ಬಳಿ ಆರೋಗ್ಯ ಇಲಾಖೆಯ ನೂತನ 'ಆರೋಗ್ಯ ಸೌಧ' ಕಟ್ಟಡ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2020, 20:42 IST
Last Updated 28 ಡಿಸೆಂಬರ್ 2020, 20:42 IST
ನೂತನ ‘ಆರೋಗ್ಯ ಸೌಧ’ ಕಟ್ಟಡದ ನೋಟ -ಪ್ರಜಾವಾಣಿ ಚಿತ್ರ
ನೂತನ ‘ಆರೋಗ್ಯ ಸೌಧ’ ಕಟ್ಟಡದ ನೋಟ -ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಗುರಿ ಇದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಮಾಗಡಿ ರಸ್ತೆ ಬಳಿ ಆರೋಗ್ಯ ಇಲಾಖೆಯ ನೂತನ 'ಆರೋಗ್ಯ ಸೌಧ' ಕಟ್ಟಡವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುಧಾಕರ್, ‘ಆರೋಗ್ಯ ಇಲಾಖೆಯ 53 ಕಚೇರಿಗಳು ಒಂದೇ ಕಡೆ ಸುಲಲಿತವಾಗಿ ಕಾರ್ಯನಿರ್ವಹಿಸಲು ಹೊಸ ಕಟ್ಟಡ ನಿರ್ಮಿಸಲಾಗಿದೆ. ಆಯುಕ್ತಾಲಯ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಎಲ್ಲವೂ ಈ ಕಟ್ಟಡದಲ್ಲಿ ಕಚೇರಿ ಹೊಂದಲಿದೆ' ಎಂದು ತಿಳಿಸಿದರು.

‘ರಾಜ್ಯದಲ್ಲಿ 18 ವೈದ್ಯಕೀಯ ಕಾಲೇಜುಗಳಿವೆ. ಆದರೆ, ಒಂಬತ್ತು ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಇಲ್ಲ. ಅಂಥ ಕಡೆಗಳಲ್ಲಿ ಸಾರ್ವಜನಿಕ– ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿ ಅಥವಾ ಬೇರೆ ಮಾದರಿಯಲ್ಲಿ ಹೊಸ ಕಾಲೇಜು ನಿರ್ಮಿಸುವ ಗುರಿ ಇದೆ. ಅದಕ್ಕೆ ಹೊಂದಿಕೊಂಡಂತೆ ಜಿಲ್ಲಾಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಕೂಡ ನಿರ್ಮಿಸಲಾಗುವುದು’ ಎಂದರು.

ADVERTISEMENT

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.