ADVERTISEMENT

ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಭಟನೆ ಇಂದು

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 19:55 IST
Last Updated 6 ಜುಲೈ 2022, 19:55 IST

ಬೆಂಗಳೂರು: ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

‘ಆರೋಗ್ಯ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ಇರುವುದರಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ’ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ವಿಶ್ವಾರಾಧ್ಯ ಎಚ್.ವೈ. ತಿಳಿಸಿದ್ದಾರೆ.

‘ನಿವೃತ್ತ ಐಎಎಸ್ ಅಧಿಕಾರಿ ಪಿ.ಎನ್. ಶ್ರೀನಿವಾಸಾಚಾರಿ ಅಧ್ಯಕ್ಷತೆಯ ಮಾನವ ಸಂಪನ್ಮೂಲ ಸಮಿತಿಯು 2020ರ ಡಿ.28ಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವರದಿ ಅನುಷ್ಠಾನ ಹಾಗೂ ಬೇಡಿಕೆಗಳ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ವರದಿ ಅನುಷ್ಠಾನಕ್ಕೆ ಸರ್ಕಾರ ಕ್ರಮ ಕೈಗೊಂಡಿಲ್ಲ’ ಎಂದು ಬೇಸರ ವ್ಯಕ್ತ
ಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.