ADVERTISEMENT

ಆರೋಗ್ಯ ಕಾರ್ಯಕರ್ತರಿಗೆ ಮೊದಲು ಲಸಿಕೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 21:43 IST
Last Updated 23 ಅಕ್ಟೋಬರ್ 2020, 21:43 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಕೇಂದ್ರ ಸರ್ಕಾರವು ಕೋವಿಡ್ ಲಸಿಕೆಯನ್ನು ಮೊದಲ ಹಂತದಲ್ಲಿ ಯಾರಿಗೆ ವಿತರಿಸಬೇಕು ಎಂಬ ಬಗ್ಗೆ ಯೋಜನೆ ರೂಪಿಸಿದ್ದು, ಈ ಬೆನ್ನಲ್ಲೇ ರಾಜ್ಯದ ಆರೋಗ್ಯ ಇಲಾಖೆಯು ಪೂರ್ವಸಿದ್ಧತೆ ಪ್ರಾರಂಭಿಸಿದೆ.

ಲಸಿಕೆ ವಿತರಣೆಯ ಮೊದಲ ಹಂತದಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳ ಎಲ್ಲ ಆರೋಗ್ಯ ಕಾರ್ಯಕರ್ತರನ್ನು ಫಲಾನುಭವಿಗಳು ಎಂದು ಗುರುತಿಸಲಾಗುತ್ತಿದೆ.

ಲಸಿಕೆ ವಿತರಣೆಯ ಸಿದ್ಧತೆಗೆ ಸಂಬಂಧಿಸಿದಂತೆ ಕೋವಿಡ್ ಕಾರ್ಯಪಡೆಯು ಸಭೆ ನಡೆಸಿ, ಕಾರ್ಯವಿಧಾನ ರೂಪಿಸಿದೆ. ಆರೋಗ್ಯ ಕಾರ್ಯಕರ್ತರು, ಕಿರಿಯ ಮಹಿಳಾ ಆರೋಗ್ಯ ಸಹಾಯಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಶುಶ್ರೂಷಕರು ಮತ್ತು ಮೇಲ್ವಿಚಾರಕರು, ವೈದ್ಯಾಧಿಕಾರಿಗಳು, ಆಯುಷ್ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ, ವಿಜ್ಞಾನ ಮತ್ತು ಸಂಶೋಧನಾ ಸಿಬ್ಬಂದಿ, ವೈದ್ಯಕೀಯ ಮತ್ತು ಅರೆವೈದ್ಯಕೀಯ ಹಾಗೂ ಶುಶ್ರೂಷಕ ವಿದ್ಯಾರ್ಥಿಗಳು, ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳ ಸಿಬ್ಬಂದಿ ಸೇರಿದಂತೆ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ವಲಯದಲ್ಲಿ ಕಾರ್ಯನಿರ್ವಹಿಸುವವರಿಗೆ ಮೊದಲು ಆದ್ಯತೆ ನೀಡಲು ನಿರ್ಧರಿಸಲಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.