ADVERTISEMENT

7,8ರಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 20:01 IST
Last Updated 5 ಆಗಸ್ಟ್ 2019, 20:01 IST
   

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದ್ದು, ಇದೇ 7 ಮತ್ತು 8ರಂದುಕರಾವಳಿ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಭಾರಿ ಪ್ರಮಾಣದಲ್ಲಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಭಾಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದ್ದು, 3ರಿಂದ 3.5 ಮೀಟರ್‌ನಷ್ಟು ಎತ್ತರದ ಅಲೆಗಳೂ ಏಳುತ್ತಿವೆ. ಹೀಗಾಗಿ ಇದೇ 10ರವರೆಗೆ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಉತ್ತರ ಒಳನಾಡಿನಲ್ಲಿ ಮಂಗಳವಾರ ವ್ಯಾಪಕವಾಗಿ ಮಳೆ ಸುರಿಯಲಿದ್ದು, ಬುಧವಾರದಿಂದ ಮಳೆಯ ಪ್ರಮಾಣ ತಗ್ಗಲಿದೆ. ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ.

ADVERTISEMENT

ಕದ್ರಾದಲ್ಲಿ 17 ಸೆಂ.ಮೀ.ಮಳೆ: ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ 17 ಸೆಂ.ಮೀ.ಮಳೆಯಾಗಿದೆ. ಲಿಂಗನಮಕ್ಕಿ, ಹೊಸನಗರ 14, ಕೊಲ್ಲೂರು, ಸಿದ್ದಾಪುರ 13, ಲೋಂಡಾ, ಕಳಸ, ಶಿವಮೊಗ್ಗ 12, ಕಮ್ಮರಡಿ 11, ಮೂಲ್ಕಿ 10, ಧರ್ಮಸ್ಥಳ 9, ಪಣಂಬೂರು, ಕಾರವಾರ, ಹುಂಚದಕಟ್ಟೆ 8 ಸೆಂ.ಮೀ.ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.