ADVERTISEMENT

ಬೆಂಗಳೂರಿನ ಹಲವೆಡೆ ಜೋರು ಮಳೆ

​ಪ್ರಜಾವಾಣಿ ವಾರ್ತೆ
Published 1 ಮೇ 2022, 12:40 IST
Last Updated 1 ಮೇ 2022, 12:40 IST
ಬೆಂಗಳೂರಿನಲ್ಲಿ ಭಾನುವಾರ ಸುರಿದ ಜೋರು ಮಳೆ
ಬೆಂಗಳೂರಿನಲ್ಲಿ ಭಾನುವಾರ ಸುರಿದ ಜೋರು ಮಳೆ   

ಬೆಂಗಳೂರು: ನಗರದ ಹಲವು ಪ್ರದೇಶಗಳಲ್ಲಿ ಭಾನುವಾರ ಸಂಜೆಯಿಂದ ಮಳೆ ಸುರಿಯುತ್ತಿದೆ.

ನಗರದ ಬಹುತೇಕ ಕಡೆ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಬೆಳಿಗ್ಗೆಯಿಂದಲೇ ತಂಪಿನ ಗಾಳಿಯೂ ಬೀಸುತ್ತಿತ್ತು. ಆಗಾಗ ಬಿಸಿಲು ಕಾಣಿಸಿಕೊಳ್ಳುತ್ತಿತ್ತು. ಸಂಜೆಯಿಂದ ಜೋರು ಗಾಳಿ ಜೊತೆ ಮಳೆ ಬರಲಾರಂಭಿಸಿದೆ.

ರಾಜರಾಜೇಶ್ವರಿನಗರ, ದೀಪಾಂಜಲಿನಗರ, ವಿಜಯನಗರ, ರಾಜಾಜಿನಗರ, ಯಶವಂತಪುರ, ಬಾಗಲಗುಂಟೆ, ಪೀಣ್ಯ, ವಿದ್ಯಾರಣ್ಯಪುರ, ಜಾಲಹಳ್ಳಿ, ಗೊರಗುಂಟೆಪಾಳ್ಯ, ಲಗ್ಗೆರೆ, ಕೋರಮಂಗಲ, ಮಡಿವಾಳ, ಎಂ.ಜಿ.ರಸ್ತೆ, ಶಿವಾಜಿನಗರ, ಅಶೋಕನಗರ, ಮಡಿವಾಳ ಹಾಗೂ ಹಲವೆಡೆ ಮಳೆ ಆಗುತ್ತಿದೆ.

ADVERTISEMENT

ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಕ್ರೀಡಾಕೂಟ ತಾತ್ಕಾಲಿಕ ಸ್ಥಗಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.