ADVERTISEMENT

ಬೆಂಗಳೂರಿನಲ್ಲಿ ಮಧ್ಯಾಹ್ನವೇ ಜೋರು ಮಳೆ 

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 10:49 IST
Last Updated 22 ಏಪ್ರಿಲ್ 2021, 10:49 IST
   

ಬೆಂಗಳೂರು: ನಗರದ ಬಹುತೇಕ ಪ್ರದೇಶಗಳಲ್ಲಿ ಗುರುವಾರ ಮಧ್ಯಾಹ್ನವೇ ಜೋರು ಮಳೆ ಸುರಿಯುತ್ತಿದೆ. ಬೆಳಿಗ್ಗೆಯಿಂದಬಿಸಿಲು ಹಾಗೂ ಕೆಲ ಬಾರಿ ಮೋಡ ಕವಿದ ವಾತಾವರಣವಿತ್ತು.

ಮಧ್ಯಾಹ್ನ 2.40 ಗಂಟೆಯಿಂದಲೇ ಜಿಟಿ ಜಿಟಿಯಾಗಿ ಮಳೆ ಆರಂಭವಾಗಿ, ನಂತರ ಜೋರು ಮಳೆ ಬರುತ್ತಿದೆ.ಗಾಳಿಯೂ ಜೋರಾಗಿ ಬೀಸುತ್ತಿದೆ.

ಯಶವಂತಪುರ, ಪೀಣ್ಯ, ಜಾಲಹಳ್ಳಿ, ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮಿಲೇಔಟ್, ಮೆಜೆಸ್ಟಿಕ್, ಗಾಂಧಿನಗರ, ಬಸವೇಶ್ವರನಗರ, ಮಲ್ಲೇಶ್ವರ, ಕಾಮಾಕ್ಷಿಪಾಳ್ಯಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಗುಡುಗು- ಸಿಡಿಲು ಸಹಿತ ಮಳೆ ಸುರಿಯುತ್ತಿದೆ.

ADVERTISEMENT

ಕೊರೊನಾ ಸೋಂಕು ತಡೆಗೆ ಹಲವು ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದರಿಂದ ನಗರದಲ್ಲಿಜನರ ಓಡಾಟ ಕಡಿಮೆ ಇದೆ. ಮಳೆಯಿಂದಾಗಿ ನೀರು ರಸ್ತೆ ಮೇಲೆಯೇ ಹರಿಯುತ್ತಿದೆ. ಕೆಲ ಕಡೆ ಕಾಲುವೆಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ತ್ಯಾಜ್ಯವೆಲ್ಲ ರಸ್ತೆಗೆ ಬಂದು ಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.