ದಾಬಸ್ ಪೇಟೆ: ಸೋಂಪುರ ಹೋಬಳಿಯಾದ್ಯಂತ ಶನಿವಾರ ಸಂಜೆ ಬಿರುಸಿನ ಮಳೆ ಸುರಿಯಿತು.
ಸಂಜೆ 5.30ರ ಸುಮಾರಿಗೆ ಆರಂಭವಾದ ಮಳೆ 6.30ರ ವರೆಗೆ ರಭಸವಾಗಿ ಸುರಿಯಿತು. ನಂತರ ಒಂದು ಗಂಟೆ ಜಡಿ ಮಳೆಯಾಯಿತು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಹಾಗೂ ಗಾಳಿ ಬೀಸುತ್ತಿತ್ತು.
ಮಳೆಯಿಂದಾಗಿ ವಾಹನ ಸವಾರರಿಗೆ, ಕಾರ್ಮಿಕರಿಗೆ ತೊಂದರೆಯಾಯಿತು. ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದು ರೈತರು ಹೊಲ ಉಳುಮೆ, ಮೇವಿನ ಜೋಳ ಬಿತ್ತನೆ ಕೆಲಸದಲ್ಲಿ ತೊಡಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.