ADVERTISEMENT

ರಾಜಧಾನಿ ಬೆಂಗಳೂರಿನಲ್ಲಿ ಜೋರು ಮಳೆ 

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 12:24 IST
Last Updated 20 ಏಪ್ರಿಲ್ 2021, 12:24 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ನಗರದ ಬಹುತೇಕ ಪ್ರದೇಶಗಳಲ್ಲಿ ಮಂಗಳವಾರ ಸಂಜೆ 5 ಗಂಟೆಯಿಂದ ಜೋರು ಮಳೆ ಸುರಿಯುತ್ತಿದೆ.

ನಗರದಲ್ಲಿ ಕೆಲ ದಿನಗಳಿಂದ ಬಿಸಿಲು ಹೆಚ್ಚಿತ್ತು. ಆಗಾಗ ಮೋಡ ಕವಿದ ವಾತಾವರಣವೂ ಕಂಡುಬಂದಿತ್ತು. ಮಂಗಳವಾರ ಸಂಜೆ 5ರ ನಂತರ ಜಿಟಿ ಜಿಟಿಯಾಗಿ ಮಳೆ ಆರಂಭವಾಗಿದೆ.

ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮಿ ಲೇಔಟ್, ಮೆಜೆಸ್ಟಿಕ್, ಗಾಂಧಿನಗರ, ಬಸವೇಶ್ವರನಗರ, ಮಲ್ಲೇಶ್ವರ, ಕಾಮಾಕ್ಷಿಪಾಳ್ಯ, ಯಶವಂತಪುರ, ಪೀಣ್ಯ, ಜಾಲಹಳ್ಳಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಅಬ್ಬರ ಜೋರಾಗಿದೆ.

ADVERTISEMENT

ಹಲವೆಡೆ ಕಾಮಗಾರಿಗಳು ನಡೆಯುತ್ತಿದ್ದು, ಅದೇ ಸ್ಥಳದಲ್ಲಿ ರಸ್ತೆ ಮೇಲೆಯೇ ನೀರು ಹರಿಯುತ್ತಿದೆ. ಅದರಲ್ಲೇ ವಾಹನಗಳು ಸಂಚರಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.