ADVERTISEMENT

ಬೆಂಗಳೂರು | ಭಾರಿ ಮಳೆ: ಕೆಎಸ್​ಆರ್​ಟಿಸಿ ಬಸ್‌ ಮೇಲೆ ಬಿದ್ದ ಮರದ ಕೊಂಬೆ

​ಪ್ರಜಾವಾಣಿ ವಾರ್ತೆ
Published 19 ಮೇ 2025, 15:32 IST
Last Updated 19 ಮೇ 2025, 15:32 IST
   

ಬೆಂಗಳೂರು: ಕಾವೇರಿ ಭವನಕ್ಕೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಮೇಲೆ ಮರದ ಬೃಹತ್ ಕೊಂಬೆ ಮುರಿದು ಬಿದ್ದಿದೆ. ತಕ್ಷಣವೇ ಚಾಲಕ ಬಸ್​ ಅನ್ನು ಬಲಕ್ಕೆ ಚಲಾಯಿಸುವ ಮೂಲಕ ಪ್ರಾಣ ಹಾನಿ ತಪ್ಪಿಸಿದ್ದಾರೆ.

ಪ್ಯಾಲೆಸ್ ಗುಟ್ಟಹಳ್ಳಿಯ ಅರಮನೆ ಮೈದಾನದ ಮುಂಭಾಗ ಗೇಟ್ ನಂಬರ್ 7ರ ಬಳಿ ಬಸ್ ಚಲಿಸುತ್ತಿತ್ತು. ಈ ವೇಳೆ ರಸ್ತೆ ಬದಿಯ ಮರದ ಕೊಂಬೆ ಬಸ್ ಮೇಲೆ ಬಿದ್ದಿದೆ. ಕೊಂಬೆ ಬೀಳುತ್ತಿರುವುದನ್ನು ಗಮನಿಸಿದ ಚಾಲಕ ನಾಗರಾಜು, ರಸ್ತೆಯ ಬಲಕ್ಕೆ ಬಸ್ ತಿರುಗಿಸಿದ್ದಾರೆ. ಹೀಗಾಗಿ ಕೊಂಬೆ ಬಸ್​ನ ಕನ್ನಡಿ ಮೇಲೆ ಬಿದ್ದಿದೆ.

‘ಒಂದು ವೇಳೆ ಮರದ ಕೊಂಬೆ ಬಸ್ ಮೇಲೆ ಬಿದ್ದಿದ್ದರೆ, ಪ್ರಾಣ ಹಾನಿ ಸಂಭವಿಸುವ ಸಾಧ್ಯತೆ ಇತ್ತು. ಬಸ್​ನಲ್ಲಿ 67 ಪ್ರಯಾಣಿಕರಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಲಾಗಿದೆ’ ಎಂದು ಚಾಲಕ ನಾಗರಾಜ್ ತಿಳಿಸಿದರು.

ಈ ಘಟನೆಯಿಂದ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಬಂದು ಮರದ ಕೊಂಬೆಗಳನ್ನು ತೆರವುಗೊಳಿಸಿದ್ದಾರೆ. ಸಂಚಾರ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.