ADVERTISEMENT

ಹೆಬ್ಬಾಳ ಮೇಲ್ಸೇತುವೆ: ರಾತ್ರಿ ಸಂಚಾರ ಬಂದ್

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 20:15 IST
Last Updated 19 ಜೂನ್ 2025, 20:15 IST
ನಗರದ ಹೆಬ್ಬಾಳ ಮೇಲ್ಸೇತುವೆ ಬಳಿ ಲೂಪ್‌ (ಪಥ) ನಿರ್ಮಾಣ ಕಾಮಗಾರಿ‌ ನಡೆಯುತ್ತಿದೆ. ಪ್ರಜಾವಾಣಿ ಚಿತ್ರ ಬಿ.ಕೆ.ಜನಾರ್ದನ್‌
ನಗರದ ಹೆಬ್ಬಾಳ ಮೇಲ್ಸೇತುವೆ ಬಳಿ ಲೂಪ್‌ (ಪಥ) ನಿರ್ಮಾಣ ಕಾಮಗಾರಿ‌ ನಡೆಯುತ್ತಿದೆ. ಪ್ರಜಾವಾಣಿ ಚಿತ್ರ ಬಿ.ಕೆ.ಜನಾರ್ದನ್‌    

ಬೆಂಗಳೂರು: ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬಾಳ ಮೇಲ್ಸೇತುವೆ ಮೇಲೆ ಶುಕ್ರವಾರ ಮತ್ತು ಶನಿವಾರ ರಾತ್ರಿ ಸಂಚಾರ ಬಂದ್ ಮಾಡಲಿದ್ದು, ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.

ಬಿಬಿಎಂಪಿ ವತಿಯಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ ಜೂನ್ 20 ಮತ್ತು 21 ರಂದು ರಾತ್ರಿ 11.30ರಿಂದ ಬೆಳಿಗ್ಗೆ 5ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ: ಯಲಹಂಕ ಮತ್ತು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರುವ ಪ್ರಯಾಣಿಕರು ಮೇಲ್ಸೇತುವೆಯ ಕೆಳಗಿನ ಸರ್ವಿಸ್ ರಸ್ತೆಯನ್ನು ಬಳಸಬಹುದು.

ADVERTISEMENT

ಹೆಬ್ಬಾಳ ಸರ್ಕಲ್‌ನಲ್ಲಿ ಬಲ ತಿರುವು ಪಡೆದು ತುಮಕೂರು ಕಡೆ ಹೊರ ವರ್ತುಲ ರಸ್ತೆ ಮೂಲಕ ಸಾಗಿ ಕುವೆಂಪು ಸರ್ಕಲ್‌ನಲ್ಲಿ ಎಡ ತಿರುವು ಪಡೆದುಕೊಳ್ಳಬೇಕು. ನ್ಯೂ ಬಿಇಎಲ್‌ ರಸ್ತೆ ಮೂಲಕ ಸಾಗಿ ಸದಾಶಿವನಗರ ಪೊಲೀಸ್ ಠಾಣೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಮೇಖ್ರಿ ಸರ್ಕಲ್‌ ತಲುಪಿ ನಗರ ತಲುಪಬಹುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.