ADVERTISEMENT

ಪ್ರಾಣಿಗಳ ಕಲ್ಯಾಣಕ್ಕೆ ಸಹಾಯವಾಣಿ ಸಚಿವ ಪ್ರಭು ಚವ್ಹಾಣ್

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 21:50 IST
Last Updated 22 ಜೂನ್ 2021, 21:50 IST
ಪ್ರಭು ಚವ್ಹಾಣ್
ಪ್ರಭು ಚವ್ಹಾಣ್   

ಬೆಂಗಳೂರು: ‘ರಾಜ್ಯದಲ್ಲಿರುವ ಎಲ್ಲ ಪ್ರಾಣಿಗಳ ಕಲ್ಯಾಣ ಉದ್ದೇಶದಿಂದ 24X7 ಕಾರ್ಯನಿರ್ವಹಿಸಲಿರುವ ‘ಪ್ರಾಣಿ ಕಲ್ಯಾಣ ಸಹಾಯವಾಣಿ’ ಯನ್ನು (ವಾರ್‌ ರೂಮ್) ಆರಂಭಿಸಲಾಗುತ್ತಿದ್ದು, ಈ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಬುಧವಾರ ಚಾಲನೆ ನೀಡಲಿದ್ದಾರೆ’ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

‘ಈ ವಾರ್‌ ರೂಮ್‌ ಮೂಲಕ ರೈತರು, ಜಾನುವಾರು ಸಾಕಣೆದಾರರು ಅಗತ್ಯ ಮಾಹಿತಿಗಳನ್ನು ಪಡೆಯಬಹುದು. ಸಹಾಯವಾಣಿಗೆ ಕರೆ ಮಾಡಿದ ಕೆಲವೇ ಗಂಟೆಗಳಲ್ಲಿ ಇಲಾಖೆ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ. ಸ್ವಂತ ಉದ್ಯೋಗಕ್ಕೆ ಬೇಕಾದ ಮಾಹಿತಿ, ಆರೋಗ್ಯ, ಲಸಿಕೆ ಸೇರಿದಂತೆ ಎಲ್ಲ ವಿಷಯಗಳ ವಿವರಣೆಯನ್ನೂ ಪಡೆಯಬಹುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT