ಬೆಂಗಳೂರು: ಹೆಪಟೈಟಿಸ್ ಬಿ ಸೋಂಕು ಪತ್ತೆ ಸಂಬಂಧ 2022–23 ಸಾಲಿನಲ್ಲಿ ರಾಜ್ಯದಲ್ಲಿ 2.43 ಲಕ್ಷ ಜನರನ್ನು ತಪಾಸಣೆ ಮಾಡಲಾಗಿದೆ. ಅವರಲ್ಲಿ 6,682 ಮಂದಿಯಲ್ಲಿ ಈ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಜುಲೈ 28ರಂದು ವಿಶ್ವ ಹೆಪಟೈಟಿಸ್ ದಿನದ ಪ್ರಯುಕ್ತ ಇಲಾಖೆಯು ರಾಜ್ಯದಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಹೆಪಟೈಟಿಸ್ ಸಿ ಸೋಂಕು ಪತ್ತೆ ಸಂಬಂಧ 85,784 ಜನರನ್ನು ಪರೀಕ್ಷಿಸಲಾಗಿದ್ದು, ಅವರಲ್ಲಿ 868 ಮಂದಿಯಲ್ಲಿ ರೋಗ ಪತ್ತೆಯಾಗಿದೆ. ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಹೆಪಟೈಟಿಸ್ ಬಿ ಮತ್ತು ಹೆಪಟೈಟಿಸ್ ಸಿ ಎರಡಕ್ಕೂ ಉಚಿತ ತಪಾಸಣೆ, ರೋಗ ನಿರ್ಣಯ ಮತ್ತು ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಇಲಾಖೆ ಹೇಳಿದೆ.
‘ಹೆಪಟೈಟಿಸ್ ಎ ಮತ್ತು ಇ ಸೋಂಕು ಮಲ, ಕಲುಷಿತ ಆಹಾರ ಮತ್ತು ನೀರಿನಿಂದ ಹರಡುತ್ತದೆ. ಹೆಪಟೈಟಿಸ್ ಬಿ ಮತ್ತು ಸಿ ಸೋಂಕು ರಕ್ತ, ಲೈಂಗಿಕ ಮಾರ್ಗದ ಮೂಲಕ ಹರಡುತ್ತದೆ’ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.