ADVERTISEMENT

ಗೋಧಿ ಹಿಟ್ಟಿನ ಬಾಕ್ಸ್‌ಗಳಲ್ಲಿ ಡ್ರಗ್ಸ್‌ ಸಾಗಿಸುತ್ತಿದ್ದವರ ಸೆರೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 19:31 IST
Last Updated 21 ಡಿಸೆಂಬರ್ 2021, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಗೋಧಿ ಹಿಟ್ಟಿನ ಬಾಕ್ಸ್‌ಗಳಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟುಕೊಂಡು ಬಂದು ನಗರದ ವಿವಿಧ ಭಾಗಗಳಲ್ಲಿ ಮಾರಾಟ ಮಾಡುತ್ತಿದ್ದ ಮಣಿಪುರ ಮೂಲದ ಜುಮಾ ಖಾನ್‌ ಮತ್ತು ಸಮೀರ್‌ ಎಂಬುವರನ್ನು ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಬಂಧಿತರಿಂದ 16 ಗ್ರಾಂ ಹೆರಾಯಿನ್‌ ಜಪ್ತಿ ಮಾಡಲಾಗಿದೆ. ನಗರದ ಹೋಟೆಲ್‌ಗಳಲ್ಲಿ ಕೆಲಸ ಮಾಡಿಕೊಂಡಿದ್ದ ಆರೋಪಿಗಳು ಮ್ಯಾನ್ಮಾರ್‌ ಗಡಿಭಾಗದಲ್ಲಿ ಮಾದಕ ವಸ್ತುಗಳನ್ನು ಖರೀದಿಸುತ್ತಿದ್ದರು. ಅವುಗಳನ್ನು ಗೋಧಿ ಹಿಟ್ಟಿನ ಬಾಕ್ಸ್‌ಗಳಲ್ಲಿ ಅಡಗಿಸಿ ರೈಲಿನ ಮೂಲಕ ನಗರಕ್ಕೆ ತರುತ್ತಿದ್ದರು. ಕಾಲೇಜು ವಿದ್ಯಾರ್ಥಿಗಳು, ಐ.ಟಿ ಕಂಪನಿ ಉದ್ಯೋಗಿಗಳು ಹಾಗೂ ನಗರದಲ್ಲಿ ನೆಲೆಸಿರುವ ಉತ್ತರ ಭಾರತೀಯರಿಗೆ ಅವುಗಳನ್ನು ಮಾರುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಲಭಿಸಿದ್ದರಿಂದ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದೇವೆ’ ಎಂದು ಪೊಲೀಸರು ಹೇಳಿದ್ದಾರೆ.

‘1 ಗ್ರಾಂ ಹೆರಾಯಿನ್‌ಗೆ ₹12 ಸಾವಿರ ದರ ನಿಗದಿ ಮಾಡಿದ್ದ ಆರೋಪಿಗಳು, ಹೆರಾಯಿನ್‌ ತುಂಬಿದ್ದ ಸಣ್ಣ ಡಬ್ಬಿಯನ್ನು ₹4 ಸಾವಿರಕ್ಕೆ ಮಾರುತ್ತಿದ್ದರು ಎಂಬುದು ವಿಚಾರಣೆಯಿಂದ ಗೊತ್ತಾಗಿದೆ. ಈ ಜಾಲದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ವಿಚಾರಣೆ ಮುಂದುವರಿಸಿ ಆರೋಪಿಗಳಿಂದ ಮತ್ತಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.