ADVERTISEMENT

ವರ್ಷ ಕಳೆದರೂ ಮುಗಿಯದ ಅಂಗನವಾಡಿ ಕಾಮಗಾರಿ

ಹೆಸರಘಟ್ಟ: ₹ 8 ಲಕ್ಷ ವೆಚ್ಚದಲ್ಲಿ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 31 ಜನವರಿ 2019, 20:04 IST
Last Updated 31 ಜನವರಿ 2019, 20:04 IST
ಅರ್ಧಕ್ಕೆ ನಿಂತಿರುವ ಅಂಗನವಾಡಿ ಕಟ್ಟಡ ಕಾಮಗಾರಿ
ಅರ್ಧಕ್ಕೆ ನಿಂತಿರುವ ಅಂಗನವಾಡಿ ಕಟ್ಟಡ ಕಾಮಗಾರಿ   

ಹೆಸರಘಟ್ಟ: ‘ಗ್ರಾಮದ ಸಂತೆತೋಪಿನಲ್ಲಿ ನಿರ್ಮಾಣವಾಗುತ್ತಿರುವ ಅಂಗನವಾಡಿ ಕೇಂದ್ರದ ಕಾಮಗಾರಿ ಒಂದು ವರ್ಷವಾದರೂ ಪೂರ್ಣಗೊಂಡಿಲ್ಲ’ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ.

ಜಿಲ್ಲಾ ಪಂಚಾಯಿತಿಯಿಂದ ₹ 5 ಲಕ್ಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ₹ 3 ಲಕ್ಷಗಳನ್ನು ಅಂಗನವಾಡಿ ಕಟ್ಟಡ ನಿರ್ಮಿಸಲು ನೀಡಲಾಗಿದೆ.

‘ಅಂಗನವಾಡಿಯ ನಾಲ್ಕು ಗೋಡೆ ಮತ್ತು ಮೇಲ್ಛಾವಣಿ ನಿರ್ಮಿಸಲು ಒಂದು ವರ್ಷ ಕಾಲಾವಧಿ ತೆಗೆದುಕೊಳ್ಳಲಾಗಿದೆ. ಕಿಟಕಿ, ಬಾಗಿಲು ಮತ್ತು ನೆಲಕ್ಕೆ ಪ್ಲಾಸ್ಟರಿಂಗ್ ಮಾಡಲು ಇನ್ನು ಎಷ್ಟು ವರ್ಷಗಳು ಬೇಕೋ ಗೊತ್ತಿಲ್ಲ’ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ADVERTISEMENT

‘ಇಲ್ಲಿನ ಹೆರಿಗೆ ಅಸ್ಪತ್ರೆಯ ಒಂದು ಕೊಠಡಿಯಲ್ಲಿ ಮಕ್ಕಳನ್ನು ಕೂರಿಸಿ ಪಾಠ ಮಾಡಲಾಗುತ್ತಿದೆ. ಹೆರಿಗೆ ಅಸ್ಪತ್ರೆಯ ಪಕ್ಕ ಸೊಳ್ಳೆಗಳು ಹೆಚ್ಚು ಇವೆ. ಮಕ್ಕಳನ್ನು ಕಚ್ಚಿದರೆ ರೋಗಗಳು ಬರುವ ಸಾಧ್ಯತೆ ಇದೆ. ಆದರೆ, ಈ ಬಗ್ಗೆ ಯಾರೂ ಕಾಳಜಿ ವಹಿಸುತ್ತಿಲ್ಲ’ ಎಂದು ಗ್ರಾಮದ ನಿವಾಸಿ ಬಿಳಿಜಾಜಿ ಗೋವಿಂದರಾಜು ದೂರಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್‌ ರಾಜ್‌ ಇಲಾಖೆಯ ಸಹಾಯಕ ಇಂಜಿನಿಯರ್ ಶ್ರೀನಾಥ್, ‘2 ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚನೆ ನೀಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.