ADVERTISEMENT

ಶೌಚ ತ್ಯಾಜ್ಯ : ಗ್ರಾಮಸ್ಥರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 9 ಜನವರಿ 2019, 19:16 IST
Last Updated 9 ಜನವರಿ 2019, 19:16 IST
ಪಿಂಟ್ ಗುಂಡಿಯ ಹೊಲಸು ಸುರಿಯುತ್ತಿದ್ದರು ಹುರುಳಿ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಪಿಂಟ್ ಗುಂಡಿಯ ಹೊಲಸು ಸುರಿಯುತ್ತಿದ್ದರು ಹುರುಳಿ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.   

ಬೆಂಗಳೂರು: ಹೆಸರಘಟ್ಟ ಹೋಬಳಿ ಬಿಳಿಜಾಜಿ ಗ್ರಾಮದ ದಲಿತ ಕಾಲೊನಿಯ ಬಳಿ ಶೌಚಾಲಯ ಗುಂಡಿಯ ಹೊಲಸು ತಂದು ಸುರಿಯುತ್ತಿರುವುದರ ವಿರುದ್ಧ ಹುರುಳಿ ಚಿಕ್ಕನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

‘ಈ ಜಮೀನಿನ ಸುತ್ತ ದಲಿತರ ಮನೆಗಳಿವೆ. ಮಲದ ಗಬ್ಬುವಾಸನೆ ಇಡೀ ಊರನ್ನು ಅವರಿಸುತ್ತಿದೆ. ಗಬ್ಬುವ ವಾಸನೆಗೆ ಮಕ್ಕಳಲ್ಲಿ ಭೇದಿ ಮತ್ತು ವಾಂತಿ ಕಾಣಿಸಿಕೊಂಡಿದೆ’ ಎಂದು ಗ್ರಾಮದ ನಿವಾಸಿ ವೆಂಕಟರಮಣಪ್ಪ ಆಕ್ರೋಶ ವ್ಯಕ್ತಪಡಿಸಿದರು.

‘ಹುರುಳಿ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿಗೆ ಈ ಬಗ್ಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ಪ್ರತಿ ದಿನ ಐದಾರು ಲಾರಿ ಲೋಡ್‌ ಮಲ ತಂದು ಸುರಿಯಲಾಗುತ್ತಿದೆ. ನಾವು ದಲಿತರು ಎಂದು ಅಸಡ್ಡೆ ಮಾಡುತ್ತಿದ್ದಾರೆ’ ಎಂದು ಸ್ಥಳೀಯರಾದ ಸರೋಜಮ್ಮ ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.