ADVERTISEMENT

ನಿರ್ಬಂಧ ಮಾರ್ಗಸೂಚಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 8:53 IST
Last Updated 17 ಏಪ್ರಿಲ್ 2021, 8:53 IST
ಹೈಖೋರ್ಟ್
ಹೈಖೋರ್ಟ್   

ಬೆಂಗಳೂರು: ಕೋವಿಡ್ ಹೆಚ್ಚುತ್ತಿರುವ ಕಾರಣ ನ್ಯಾಯಾಲಯದಲ್ಲಿ ಸದ್ಯ ಅನುಸರಿಸುತ್ತಿರುವ ಮಾರ್ಗಸೂಚಿಗಳನ್ನು ಮೇ 29ರವರೆಗೆ ಮುಂದುವರಿಸುವಂತೆ ಹೈಕೋರ್ಟ್‌ ಆದೇಶಿಸಿದೆ.

ನ್ಯಾಯಾಲಯಗಳಲ್ಲಿ ಕಲಾಪಗಳು ಹೇಗೆ ನಡೆಯಬೇಕು ಎಂಬುದರ ಕುರಿತು ಹೊರಡಿಸಿದ್ದ ಮಾರ್ಗಸೂಚಿ ಏಪ್ರಿಲ್‌ನಲ್ಲಿ ಕೊನೆಗೊಳ್ಳಳಿದ್ದು, ಅದನ್ನು ಮೇ 29ರವರೆಗೆ ವಿಸ್ತರಿಸಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿತು.

ಯಾವುದೇ ಕಟ್ಟಡಗಳ ತೆರವು ರೀತಿಯ ಆದೇಶಗಳನ್ನು ಮೇ 29ರವರೆಗೆ ತಡೆಹಿಡಿಯಬೇಕು. ಅದನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಬರುವವರ ಸಂಖ್ಯೆ ಕಡಿಮೆ ಮಾಡುವುದು ಇದರ ಉದ್ದೇಶ. ಒಂದು ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗುತ್ತಿರುವ ಜಿಲ್ಲೆಗಳ ನ್ಯಾಯಾಲಯಗಳಲ್ಲೂ ಇದೇ ರೀತಿಯ ನಿರ್ಬಂಧಗಳನ್ನು ಅನುಸರಿಸಬೇಕು ಎಂದು ಪೀಠ ತಿಳಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.