ADVERTISEMENT

ಕೆರೆ ಒತ್ತುವರಿ ಸರ್ವೆಗೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 18:11 IST
Last Updated 21 ಜನವರಿ 2021, 18:11 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕೆ.ಆರ್‌.ಪುರ ಬಸವನಪುರ ಕೆರೆ ಜಾಗ ಒತ್ತುವರಿಯಾಗಿದೆಯೇ ಎಂಬುದನ್ನು ಪರಿಶೀಲಿಸಲು ಸರ್ವೆ ಕಾರ್ಯ ನಡೆಸುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸಾಮಾಜಿಕ ಹೋರಾಟಗಾರ ಎ. ವೇಲು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

‘14 ಎಕರೆ 7 ಗುಂಟೆ ವಿಸ್ತೀರ್ಣದ ಕೆರೆಯ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ತೆರವುಗೊಳಿಸಲು ಆದೇಶಿಸಬೇಕು’ ಎಂದು ಕೋರಿದ್ದರು.

ADVERTISEMENT

ಸಮೀಪ ಇರುವ ಕಾರ್ಖಾನೆಗಳಿಂದ ಕೊಳಚೆ ನೀರನ್ನು ಕೆರೆಗೆ ಹರಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಸಮರ್ಥ ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣಾ ಮಂಡಳಿಗೂ ಪೀಠ ನಿರ್ದೇಶನ ನೀಡಿತು. ಒಂದು ತಿಂಗಳ ಅವಧಿಯಲ್ಲಿ ವರದಿ ಸಲ್ಲಿಸಬೇಕು ಎಂದು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.