ADVERTISEMENT

ಪೊಲೀಸ್ ದೂರು ಪ್ರಾಧಿಕಾರ: ಆಕ್ಷೇಪಣೆಗೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 4 ಜುಲೈ 2019, 20:41 IST
Last Updated 4 ಜುಲೈ 2019, 20:41 IST

ಬೆಂಗಳೂರು: ‘ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಮುಖ್ಯಸ್ಥರನ್ನು ನೇಮಕ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂದು ತಿಂಗಳ ಒಳಗಾಗಿ ಆಕ್ಷೇಪಣೆ ಸಲ್ಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಈ ಕುರಿತಂತೆ ನಗರದ ಸುಧಾ ಕಟವಾ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಆಕ್ಷೇಪ: ‘ಪ್ರಾಧಿಕಾರದ ಮುಖ್ಯಸ್ಥರಾಗಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ.ಎಸ್.ಪಾಚ್ಚಾಪುರೆ 2017ರ ಆಗಸ್ಟ್‌ 8ರಂದು ರಾಜೀನಾಮೆ ನೀಡಿದ್ದಾರೆ. ಈವರೆಗೂ ಆ ಹುದ್ದೆಯನ್ನು ಭರ್ತಿ ಮಾಡಿಲ್ಲ. ಪ್ರಾಧಿಕಾರದ ಕಚೇರಿಗೆ ಮೂಲ ಸೌಕರ್ಯ ಕಲ್ಪಿಸಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ. ಸುಪ್ರೀಂ ಕೋರ್ಟ್ ನಿರ್ದೇಶನದನ್ವಯ ಪೊಲೀ ಸರ ವಿರುದ್ಧದ ದೂರಗಳ ವಿಚಾರಣೆಗಾಗಿ ಈ ಪ್ರಾಧಿಕಾರ ರಚನೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.