ADVERTISEMENT

ಸಭೆ–ಮೆರವಣಿಗೆ ನಿರ್ಬಂಧ: ಹೈಕೋರ್ಟ್‌ ತಾಕೀತು

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2019, 20:11 IST
Last Updated 1 ಆಗಸ್ಟ್ 2019, 20:11 IST
   

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಾರ್ವಜನಿಕ ಸಭೆ ಮತ್ತು ಮೆರವಣಿಗೆ ನಿರ್ಬಂಧಿಸುವ ಕುರಿತು 2009ರಲ್ಲಿ ಹೊರಡಿಸಿರುವ ಅಧಿಸೂಚನೆ ಜಾರಿಗೊಳಿಸಬೇಕು’ ಎಂದು ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನಿರ್ದೇಶಿಸಿದೆ.

ವಕೀಲ ಎ.ವಿ.ಅಮರನಾಥನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಲೇವಾರಿ ಮಾಡಿದೆ.

‘2009ರ ಮೇ 21ರಂದು ಹೊರಡಿಸಲಾಗಿರುವ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಆಯುಕ್ತರು ಎಲ್ಲ ಅಧೀನ ಅಧಿಕಾರಿಗಳಿಗೆ ತಾಕೀತು ಮಾಡಬೇಕು. ಈ ಸಂಬಂಧದ ಆದೇಶವನ್ನು ಕನ್ನಡ ಮತ್ತು ಇಂಗ್ಲಿಷ್‌ ಪತ್ರಿಕೆಗಳಲ್ಲಿ ಪ್ರಕಟಿಸಿ ವ್ಯಾಪಕ ಪ್ರಚಾರ ನೀಡಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ.

ADVERTISEMENT

‘ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಭೆ, ಮೆರವಣಿಗೆಗಳಿಂದ ರಸ್ತೆಗಳ ಬಂದ್ ಆಗುತ್ತಿದೆ’ ಎಂದು ಆಕ್ಷೇಪಿಸಿ ಅಮರನಾಥನ್‌ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.