ADVERTISEMENT

ವೃದ್ಧಾಶ್ರಮಗಳ ವಿವರ ಕೇಳಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 16:55 IST
Last Updated 5 ಜನವರಿ 2021, 16:55 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ನಗರದಲ್ಲಿರುವ ವೃದ್ಧಾಶ್ರಮಗಳ ಸ್ಥಿತಿಗತಿಗೆ ಸಂಬಂಧಿಸಿದ ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಗಿರಿನಗರದ 8ನೇ ಮುಖ್ಯ ರಸ್ತೆಯಲ್ಲಿನ ವೃದ್ಧಾಶ್ರಮದಿಂದ ಉಂಟಾಗುತ್ತಿರುವ ಶಬ್ದ ಮಾಲಿನ್ಯದ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ನಿರ್ದೇಶನ ನೀಡಿತು.

‘ಈ ಸಮಸ್ಯೆಯನ್ನು ರಾಜ್ಯ ಸರ್ಕಾರ ಪರಿಹರಿಸಬೇಕು.ವೃದ್ಧಾಶ್ರಮ ಮುಚ್ಚಲು ಆದೇಶಿಸುವುದು ಹಿರಿಯ ನಾಗರಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಲಿದೆ’ ಎಂದು ಪೀಠ ಅಭಿಪ್ರಾಯಪಟ್ಟಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.