ADVERTISEMENT

ಎನ್‌.ಆರ್. ರಮೇಶ್ ವಿರುದ್ಧ ತನಿಖೆ ವರದಿ ಕೇಳಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 19:31 IST
Last Updated 14 ಜೂನ್ 2021, 19:31 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಬಿಬಿಎಂಪಿಯ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಅವರು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ 2015ರಲ್ಲಿ ದಾಖಲಿಸಿದ್ದ ದೂರು ಆಧರಿಸಿ ನಡೆಸಿರುವ ತನಿಖೆ ಬಗ್ಗೆ ವರದಿ ಸಲ್ಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಎನ್‌.ಆರ್‌.ರಮೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

‘ಅಧಿಕಾರಿಯೊಬ್ಬರು ದೂರು ನೀಡಿ ಆರು ವರ್ಷ ಕಳೆದಿದೆ. ಆದರೂ, ಏಕೆ ಕ್ರಮ ಕೈಗೊಂಡಿಲ್ಲ. ತನಿಖೆ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡಬೇಕು’ ಎಂದು ಅಮೃತಹಳ್ಳಿ ಪೊಲೀಸರಿಗೆ ನಿರ್ದೇಶನ ನೀಡಿತು.

ADVERTISEMENT

ರಮೇಶ್‌ ಸಲ್ಲಿಸಿರುವ ಅರ್ಜಿಯಲ್ಲಿ 5ನೇ ಪ್ರತಿವಾದಿ ಆಗಿರುವ ಪಾಲಿಕೆ ಮುಖ್ಯ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಪರ ವಕೀಲರು, ‘ಎನ್‌.ಆರ್‌.ರಮೇಶ್ ವಿರುದ್ಧ 2015ರಲ್ಲೇ ದೂರು ದಾಖಲಿಸಿದ್ದರೂ ಕ್ರಮ ಕೈಗೊಂಡಿಲ್ಲ’ ಎಂದು ಪೀಠದ ಗಮನಕ್ಕೆ ತಂದರು. ವಿಚಾರಣೆಯನ್ನು ಪೀಠ ಜೂ.30ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.