ADVERTISEMENT

ಟಿಡಿಆರ್‌: ಎಸಿಬಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2019, 19:29 IST
Last Updated 21 ಆಗಸ್ಟ್ 2019, 19:29 IST

ಬೆಂಗಳೂರು: ‘ಅಭಿವೃದ್ಧಿ ಹಕ್ಕು ವರ್ಗಾವಣೆ’ (ಟಿಡಿಆರ್) ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ‘ಭ್ರಷ್ಟಾಚಾರ ನಿಗ್ರಹ ದಳ’ಕ್ಕೆ ನೋಟಿಸ್‌ ಜಾರಿಗೆ ಹೈಕೋರ್ಟ್ ಆದೇಶಿಸಿದೆ.

‘ನನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು’ ಎಂದು ಕೋರಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಎಂಜಿನಿಯರ್ ಎಸ್. ಕೃಷ್ಣಲಾಲ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ನನ್ನ ವಿರುದ್ಧದ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಮಹದೇವಪುರ ವಲಯದ ಸಹಾಯಕ ಎಂಜಿನಿಯರ್ ಆಗಿದ್ದಾಗ ನಾನು ಕಾನೂನು ಹಾಗೂ ನಿಯಮಗಳಿಗೆ ಅನುಸಾರವಾಗಿಯೇ ಕರ್ತವ್ಯ ನಿರ್ವಹಿಸಿದ್ದೇನೆ. ಆದ್ದರಿಂದ ಎಸಿಬಿ ದಾಖಲಿಸಿಕೊಂಡಿರುವ ಎಫ್‌ಐಆರ್‌ ರದ್ದುಗೊಳಿಸಬೇಕು’ ಎಂದು ಕೃಷ್ಣಲಾಲ್‌ ಕೋರಿದ್ದಾರೆ. ವಿಚಾರಣೆಯನ್ನು ಇದೇ 27ಕ್ಕೆ ಮುಂದೂಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.