ಬೆಂಗಳೂರು: ‘ಮಾಸ್ಕ್ ಧರಿಸುವುದು ಮತ್ತು ಅಂತರ ಕಾಪಾಡುವುದು ಕಡ್ಡಾಯಎಂಬ ನಿಯಮ ಉಲ್ಲಂಘಿಸಿದ ಜನರಿಂದ ₹3 ಕೋಟಿ ದಂಡ ವಸೂಲಿ ಮಾಡಲಾಗಿದೆ’ ಎಂದು ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ ನೀಡಿದೆ.
‘ಮಾಸ್ಕ್ ಧರಿಸದ 1.25 ಲಕ್ಷ ಜನರಿಂದ ₹2.66 ಕೋಟಿ ಸಂಗ್ರಹಿಸಲಾಗಿದೆ. ಅಂತರ ಕಾಪಾಡದ ಜನರಿಂದ ₹31.5 ಲಕ್ಷ ಸಂಗ್ರಹಿಸಲಾಗಿದೆ. ಕೋವಿಡ್ ನಿಯಮಗಳನ್ನು ಪಾಲಿಸದ 170 ಸಂಸ್ಥೆಗಳನ್ನು ಮುಚ್ಚಿಸಲಾಗಿದೆ’ ಎಂದು ವಿವರಿಸಿದೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಾದ್ಯಂತ5,121 ಹೊಸ ಪ್ರಕರಣಗಳು ದಾಖಲಾಗಿವೆ, 43 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 3,505 ಜನ ಗುಣಮುಖರಾಗಿದ್ದಾರೆ. ಒಟ್ಟು 60,197 ಕೊರೊನಾ ವೈರಸ್ ಸೋಂಕು ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.