ADVERTISEMENT

ಬಿಡಿಎ ಕಾಯ್ದೆ ತಿದ್ದುಪಡಿ: ಹೈಕೋರ್ಟ್ ನೋಟಿಸ್

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 19:31 IST
Last Updated 4 ಜನವರಿ 2021, 19:31 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾಯ್ದೆ ತಿದ್ದುಪಡಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ನೀಡಿದೆ.

1976ರ ಬಿಡಿಎ ಕಾಯ್ದೆಗೆ 38 ಡಿ ಸೆಕ್ಷನ್ ಸೇರ್ಪಡೆ ಮಾಡುವ ಮೂಲಕ ಸರ್ಕಾರದ ಅನುಮತಿ ಪಡೆಯದೆ ನಿರ್ಮಿಸಿರುವ ಕಟ್ಟಡಗಳನ್ನೂ ಕಾನೂನುಬದ್ಧಗೊಳಿಸಲು ಅವಕಾಶ ನೀಡಲಾಗಿದೆ ಎಂದು ಅರ್ಜಿದಾರ ಕೆ.ಬಿ. ವಿಜಯಕುಮಾರ್ ದೂರಿದ್ದಾರೆ.

ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ಆದೇಶ ನೀಡಿವೆ. ಕೋವಿಡ್ ಕಾರಣದಿಂದ ತೆರವು ಕಾರ್ಯಾಚರಣೆ ವಿಳಂಬವಾಗಿದೆ. ಈ ಸಂದರ್ಭದಲ್ಲಿ ಬಿಡಿಎ ಕಾಯ್ದೆಗೆ ತಿದ್ದುಪಡಿ ತಂದು ಅನಧಿಕೃತ ಕಟ್ಟಡಗಳ ರಕ್ಷಣೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.