ADVERTISEMENT

ಟರ್ಫ್‌ ಕ್ಲಬ್‌ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 19:01 IST
Last Updated 18 ಜನವರಿ 2021, 19:01 IST

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸಬೇಕು ಎಂದು ಕರ್ನಾಟಕ ಮಾಹಿತಿ ಆಯೋಗ ನೀಡಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ (ಬಿಟಿಸಿಎಲ್), ಲೇಡೀಸ್ ಕ್ಲಬ್, ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಮತ್ತು ಮೈಸೂರು ರೇಸ್ ಕ್ಲಬ್ ಲಿಮಿಟೆಡ್ (ಎಂಆರ್‌ಸಿಎಲ್‌) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಕ್ಲಬ್‌ ಮತ್ತು ಸಂಸ್ಥೆಗಳು ಸಾರ್ವಜನಿಕ ಪ್ರಾಧಿಕಾರದ ವ್ಯಾಖ್ಯಾನಕ್ಕೆ ಒಳಪಡುವುದಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಬಿ. ಭಜಂತ್ರಿ ಅವರಿದ್ದ ಏಕ ಸದಸ್ಯ ಪೀಠ ಪರಿಶೀಲನೆ ನಡೆಸಿತು.

ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು ಮತ್ತು ಕ್ರೀಡಾ ಕ್ಲಬ್‌ ರೀತಿಯ ಸಂಸ್ಥೆಗಳು ನಗರದಲ್ಲಿ ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ಭೂಮಿ ಪಡೆದಿರುತ್ತವೆ. ಸರ್ಕಾರದಿಂದ ಹಣಕಾಸಿನ ನೆರವನ್ನೂ ಪಡೆದಿರುತ್ತವೆ. ಅವುಗಳೆಲ್ಲವನ್ನೂ ಗಮನಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿತು.

ADVERTISEMENT

ಆರ್‌ಟಿಐ ಕಾಯ್ದೆಯ ಸೆಕ್ಷನ್‌ 2(ಎಚ್‌)ನಲ್ಲಿರುವ ಪ್ರತಿಯೊಂದು ಷರತ್ತನ್ನೂ ಪ್ರತ್ಯೇಕವಾಗಿ ಗ್ರಹಿಸಬೇಕಾದ ಅಗತ್ಯವಿದೆ. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ಎರಡು ಆದೇಶಗಳನ್ನೂ ಗಮನಿಸಬೇಕಾಗುತ್ತದೆ. ಕ್ಲಬ್‌ ಮತ್ತು ಸಂಸ್ಥೆಗಳು ಆರ್‌ಟಿಐ ವ್ಯಾಪ್ತಿಗೆ ಒಳಪಡುವುದಿಲ್ಲ ಎಂಬ ವಾದವನ್ನು ಒಪ್ಪಲು ಆಗುವುದಿಲ್ಲ ಎಂದು ಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.