ADVERTISEMENT

ಜಾತಿಗೊಂದು ನಿಗಮ: ಆಕ್ಷೇಪಣೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 16:32 IST
Last Updated 8 ಜನವರಿ 2021, 16:32 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಜಾತಿಗೊಂದು ನಿಗಮ– ಮಂಡಳಿ ರಚನೆ ಮಾಡಿರುವ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಬಗ್ಗೆ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಮರಾಠಾ ಅಭಿವೃದ್ಧಿ ನಿಗಮ ಮತ್ತು ಆರ್ಯವೈಶ್ಯ ಅಭಿವೃದ್ಧಿ ನಿಗಮದ ಸ್ಥಾಪನೆ ಮಾಡಿ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ವಕೀಲ ಎಸ್. ಬಸವರಾಜು ಹಾಗೂ ಇತರರು ಪ್ರತ್ಯೇಕ ನಾಲ್ಕು ಅರ್ಜಿ ಸಲ್ಲಿಸಿದ್ದಾರೆ.

ಇವುಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ತಿಳಿಸಿದೆ.

ADVERTISEMENT

ಸರ್ಕಾರದ ಪರ ಹಾಜರಿದ್ದ ವಕೀಲರು, ‘ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕು’ ಎಂದು ಕೋರಿದರು. ವಿಚಾರಣೆಯನ್ನು ಜ.22ಕ್ಕೆ ಪೀಠ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.