ADVERTISEMENT

ಮೇಲ್ಸೇತುವೆ: ಕೋರ್ಟ್ ಅಸ್ತು

ಶಿವಾನಂದ ವೃತ್ತದಲ್ಲಿನ ಸೇತುವೆ ಕಾಮಗಾರಿ ಯೋಜನೆ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 19:10 IST
Last Updated 8 ಜುಲೈ 2022, 19:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಶಿವಾನಂದ ವೃತ್ತ ದಲ್ಲಿನ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಯೋಜನೆ ಪ್ರಶ್ನಿಸಿ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್‌, ಕಾಮಗಾರಿ ಪೂರ್ಣಗೊಳಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹಸಿರು ನಿಶಾನೆ ತೋರಿದೆ.

ಇದೇ ವೇಳೆ ಶಿವಾನಂದ ವೃತ್ತದ ಜಂಕ್ಷನ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆಯ ಇಳಿಜಾರು ಪ್ರಮಾಣ ವನ್ನು (ಶೇಷಾದ್ರಿ ಪುರ ರಸ್ತೆ ಕಡೆಗೆ ಸಾಗುವ) ಶೇ 6.66ರಷ್ಟು ಹೆಚ್ಚಿಸಲು ಅನುಮತಿ ಕೋರಿ ಬಿಬಿಎಂಪಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನುನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಪುರಸ್ಕರಿಸಿದೆ.

‘ಮೇಲ್ಸೇತುವೆ ಯೋಜನೆಗೆ ಮುಖ್ಯಮಂತ್ರಿಗಳ ನೇತೃತ್ವದ ರಾಜ್ಯದ ಉನ್ನತ ಮಟ್ಟದ ಕಾರ್ಯಕಾರಿ ಸಮಿತಿ ಅನುಮೋದನೆ ನೀಡಿದೆ. ಹಾಗಾಗಿ, ಯೋಜನೆ ಸಂಬಂಧ ನಿರ್ಣಯ ಕೈಗೊಳ್ಳು ವುದರಲ್ಲಿ ನ್ಯಾಯಾಲಯದ ಪಾತ್ರ ಸೀಮಿತವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

‘ನಗರದ ಹೃದಯ ಭಾಗದ ಜನ ನಿಬಿಡ ಹಾಗೂ ವಾಹನ ದಟ್ಟಣೆಯಿರುವ ರಸ್ತೆಯಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಯೋಜನೆ ವಿಳಂಬದಿಂದ ರಸ್ತೆ ಯನ್ನು ಬಳಸುವ ವಾಹನದಾರರಿಗೆ ಸಮಸ್ಯೆ ಉಂಟಾಗುತ್ತದೆ ಹಾಗೂ ಯೋಜನೆಯ ವೆಚ್ಚ ಹೆಚ್ಚಾಗಲಿದೆ. ಯಾವುದೇ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು ನಿಗದಿತ ಅವಧಿಯಲ್ಲಿ ಮುಕ್ತಾಯವಾಗಬೇಕು. ಇದರಿಂದ ಸಮಯ ಮತ್ತು ಹಣ ಉಳಿತಾಯವಾಗು ತ್ತದೆ’ ಎಂದು ಆದೇಶದಲ್ಲಿ ವಿವರಿಸಿದೆ.

‘ಶೇಷಾದ್ರಿಪುರ ಕಡೆಗೆ ಸಾಗುವ ಇಳಿಜಾರಿನ ಮಾರ್ಗವನ್ನು ಹೆಚ್ಚಿಸಲು ಬಿಬಿಎಂಪಿ ಅನುಮತಿ ಕೋರಿದೆ.ಸುರಕ್ಷತೆ ದೃಷ್ಟಿಯಿಂದ ಮೇಲ್ಸೇತುವೆ ಇಳಿಜಾರಿನ ಪ್ರಮಾಣ ಹೆಚ್ಚಿಸಬಹುದು ಎಂಬುದಾಗಿಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆಯೂ (ಐಐಎಸ್ಸಿ) ವರದಿ ಸಲ್ಲಿಸಿದೆ. ಆದ್ದರಿಂದ, ಐಐಎಸ್‌ಸಿಯ ವರದಿಯನ್ನು ನ್ಯಾಯಾಲಯ ಒಪ್ಪುತ್ತದೆ‘ ಎಂದು ಆದೇಶದಲ್ಲಿ ತಿಳಿಸಿದೆ.

ಪ್ರಕರಣವೇನು?: ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿ ರಾಜ್ಯ ಸರ್ಕಾರ 2017ರ ಜೂನ್ 24ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಕುಮಾರ ಪಾರ್ಕ್ ಪೂರ್ವ ಭಾಗದ ನಿವಾಸಿ ಬಿ.ಪಿ. ಮಹೇಶ್
ಹಾಗೂ ಇತರರು 2017ರ ಅಕ್ಟೋ ಬರ್‌ನಲ್ಲಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕಾಮ ಗಾರಿಗೆ ತಡೆ ನೀಡಲು 2018ರ ಜನವರಿ 8ರಂದು ಹೈಕೋರ್ಟ್ ನಿರಾಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.