ADVERTISEMENT

ದಾಸರಹಳ್ಳಿ ರಸ್ತೆ ದುರಸ್ತಿಗೆ ಹೈಕೋರ್ಟ್ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2021, 2:51 IST
Last Updated 26 ಅಕ್ಟೋಬರ್ 2021, 2:51 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ದಾಸರಹಳ್ಳಿ ವಲಯದಲ್ಲಿ ರಸ್ತೆಗಳು ಅಸ್ತಿತ್ವದಲ್ಲಿ ಇವೆಯೇ’ ಎಂದು ಬಿಬಿಎಂಪಿಯನ್ನು ಹೈಕೋರ್ಟ್ ಪ್ರಶ್ನೆ ಮಾಡಿದೆ.

ವಕೀಲ ಅಶ್ವತ್ಥನಾರಾಯಣ ಚೌಧರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ ಅವಸ್ತಿ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.

‘ಮಳೆ ಮುಗಿದ ಬಳಿಕ ಅನುದಾನ ಲಭ್ಯವಾದರೆ ಕಾಮಗಾರಿ ನಡೆಸಲಾಗುವುದು’ ಎಂದು ಬಿಬಿಎಂಪಿ ಪರ ವಕೀಲರು ಮಾಹಿತಿ ನೀಡಿದರು. ‘ಅನುದಾನದ ಲಭ್ಯತೆ ಬಗ್ಗೆ ಸಬೂಬು ಹೇಳದೆ ರಸ್ತೆ ನಿರ್ಮಿಸುವುದು ಪಾಲಿಕೆ ಜವಾಬ್ದಾರಿ’ ಎಂದು ಪೀಠ ಹೇಳಿತು. ಕಾಮಗಾರಿ ಪ್ರಗತಿ ಬಗ್ಗೆ ಜನವರಿ ವೇಳೆಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.