ADVERTISEMENT

ಅಫಿಡವಿಟ್ ಸಲ್ಲಿಸಲು ಕೆಎಸ್‌ಪಿಸಿಬಿಗೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2020, 21:05 IST
Last Updated 14 ಅಕ್ಟೋಬರ್ 2020, 21:05 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: 2016ರ ಘನತಾಜ್ಯ ನಿರ್ವಹಣೆ ನಿಯಮಗಳ ಉಲ್ಲಂಘನೆ ಮಾಡುತ್ತಿರುವ ಸ್ಥಳೀಯ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲು ವಿಫಲವಾಗಿರುವ ಬಗ್ಗೆ ಅಕ್ಟೋಬರ್ 23ರೊಳಗೆ ವೈಯಕ್ತಿಕ ಅಫಿಡವಿಟ್‌ ಸಲ್ಲಿಸುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣಾ ಮಂಡಳಿ (ಕೆಎಸ್‌ಪಿಸಿಬಿ) ಸದಸ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ವಿಷಯದ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಮಂಗಳೂರಿನ ಪಚ್ಚನಾಡಿ ಭೂಕುಸಿತ ಘಟನೆಯಲ್ಲಿ ಕೆಎಸ್‌ಪಿಸಿಬಿ ಪಾತ್ರದ ಬಗ್ಗೆ ಪ್ರಸ್ತಾಪಿಸಿ ದಂಡ ವಿಧಿಸಬಾರದೇಕೇ ಎಂದು ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಲು ಮಂಡಳಿ ವಿಫಲವಾಗಿದೆ’ ಎಂದು ಹೇಳಿತು.

‘ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೇಂದ್ರ ಸರ್ಕಾರ ಅಧಿಕಾರ ನೀಡಿದೆ. ಆದರೆ, ಕೆಎಸ್‌ಪಿಸಿಬಿ ಇದನ್ನು ಮರೆತಿದೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.