ADVERTISEMENT

ರಸ್ತೆ ಗುಂಡಿ ಪರಿಶೀಲಿಸಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 18:39 IST
Last Updated 30 ಮಾರ್ಚ್ 2021, 18:39 IST

ಬೆಂಗಳೂರು: ‘ನಗರದ 101 ಬೀದಿಗಳು ಮತ್ತು 642 ಪಾದಚಾರಿ ಮಾರ್ಗಗಳ ಸಮಸ್ಯೆಗಳನ್ನು ಪರಿಶೀಲಿಸಿ ಸರಿಪಡಿಸಲಾಗಿದೆ’ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಕೆಲ ಬೀದಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸುವಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (ಕೆಎಸ್‌ಎಲ್‌ಎಸ್‌ಎ) ಪೀಠ ನಿರ್ದೇಶನ ನೀಡಿದೆ.

ಈ ಸಂಬಂಧ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥಪ್ರಸಾದ್ ಸಲ್ಲಿಸಿರುವ ಅಫಿಡವಿಟ್ ಪರಿಶೀಲಿಸಿದ ಪೀಠವು, ಸಮಸ್ಯೆ ಸರಿಪಡಿಸಿರುವ ನಿರ್ದಿಷ್ಟ ಸ್ಥಳ ಮತ್ತು ರಸ್ತೆಗಳ ವಿವರವನ್ನು ಪ್ರಾಧಿಕಾರಕ್ಕೆ ಒದಗಿಸುವಂತೆ ಪಾಲಿಕೆಗೆ ನಿರ್ದೇಶನ ನೀಡಿದೆ.

‘ಕೆಎಸ್‌ಎಲ್‌ಎಸ್‌ಎ ಕಾರ್ಯದರ್ಶಿ ಅವರು ಎಲ್ಲರ ಸಹಕಾರ ಪಡೆದು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಅಫಿಡವಿಟ್‌ನಲ್ಲಿ ಸಲ್ಲಿಸಿರುವ ವಿವರ ಸರಿಯಿದೆಯೇ ಎಂಬುದನ್ನು ಗಮನಿಸಬೇಕು’ ಎಂದು ಪೀಠ ತಿಳಿಸಿತು. ಏ.22ಕ್ಕೆ ವಿಚಾರಣೆ ಮುಂದೂಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.