ADVERTISEMENT

ವಿದ್ಯುತ್ ಪರಿವರ್ತಕ: ಪರವಾನಗಿ ಪ್ರತಿ ಸಲ್ಲಿಸಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 2:44 IST
Last Updated 5 ಮಾರ್ಚ್ 2021, 2:44 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಪಾದಚಾರಿ ಮಾರ್ಗಗಳಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸಲು ಪಡೆದಿರುವ ಪರವಾನಗಿಯ ಪ್ರತಿ ಒದಗಿಸುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ (ಬೆಸ್ಕಾಂ) ಹೈಕೋರ್ಟ್‌ ನಿರ್ದೇಶನ ನೀಡಿದೆ.

2003ರ ವಿದ್ಯುತ್ ಕಾಯ್ದೆ ಪ್ರಕಾರ ಸ್ಥಳೀಯ ಪ್ರಾಧಿಕಾರಗಳಿಂದ ಯಾವುದೇ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಬೆಸ್ಕಾಂ ವಿವರಣೆ ಸಲ್ಲಿಸಿದ ಬಳಿಕ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿತು.

‘ಬೆಸ್ಕಾಂ ತೆಗೆದುಕೊಂಡ ನಿಲುವು ಗಮನಿಸಿದರೆ ಸ್ಥಳೀಯ ಪ್ರಾಧಿಕಾರವನ್ನು ಸಂಪರ್ಕಿಸದೆ ಸಾರ್ವಜನಿಕ ರಸ್ತೆಗಳಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸಲಾಗುತ್ತಿದೆ. ವಿದ್ಯುತ್ ಕಾಯ್ದೆಯ ಸೆಕ್ಷನ್ 67ರ ಅಧಿಕಾರವನ್ನು ಪರಿಶೀಲಿಸುವ ಉದ್ದೇಶದಿಂದ ಈ ನಿರ್ದೇಶನ ನೀಡಲಾಗಿದೆ’ ಎಂದು ಪೀಠ ತಿಳಿಸಿತು.

ADVERTISEMENT

ಹೊಸದಾಗಿ ವಿನ್ಯಾಸಗೊಳಿಸಿರುವ ವಿದ್ಯುತ್ ಪರಿವರ್ತಕಗಳು ಪಾದಚಾರಿಗಳಿಗೆ ಸುರಕ್ಷಿತವಾಗಿವೆ. ಕಂಪನಿಯ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬೆಸ್ಕಾಂ ಮಾಹಿತಿ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.