ADVERTISEMENT

ಅಹ್ಮದ್‌ ಖಾನ್‌ ಸಂಶೋಧನಾ ಕೇಂದ್ರ: ಕ್ರಮಕ್ಕೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2025, 15:49 IST
Last Updated 25 ನವೆಂಬರ್ 2025, 15:49 IST
<div class="paragraphs"><p> ಹೈಕೋರ್ಟ್‌ </p></div>

ಹೈಕೋರ್ಟ್‌

   

ಬೆಂಗಳೂರು: ‘ಸರ್ ಸೈಯದ್ ಅಹ್ಮದ್ ಖಾನ್ ಸಂಶೋಧನಾ ಕೇಂದ್ರದ ಕಾರ್ಯವೈಖರಿ ಕುರಿತು ಮಾಡಲಾಗಿರುವ ಆರೋಪಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಸಂಬಂಧ ಮೊಹಮ್ಮದ್ ವಜೀರ್ ಬೇಗ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ  ಮಂಗಳವಾರ ವಿಚಾರಣೆ ನಡೆಸಿತು.

ADVERTISEMENT

‘ಸಂಶೋಧನಾ ಕೇಂದ್ರದ ಕಾರ್ಯವೈಖರಿ ಬಗ್ಗೆ ಮಾಡಲಾಗಿರುವ ಆರೋಪಗಳನ್ನು ಪರಿಶೀಲಿಸಿ, ತಪ್ಪುಗಳು ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯಕ್ಕೆ ನಿರ್ದೇಶಿಸಿ ಅರ್ಜಿ ವಿಲೇವಾರಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.