ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಜಾಲ ಪ್ರಕರಣದ ಆರೋಪಿ ವಿರೇನ್ ಖನ್ನಗೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
2018ರಲ್ಲಿ ವಿರೇನ್ ಖನ್ನ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐರ್ ದಾಖಲಾಗಿತ್ತು. ಅದನ್ನು ಆಧರಿಸಿ ಸಿಸಿಬಿ ಪೊಲೀಸರು ನವದೆಹಲಿಯಲ್ಲಿ ಬಂಧಿಸಿದ್ದರು.
ಕಾನೂನು ಉಲ್ಲಂಘಿಸಿ ಪಾರ್ಟಿಗಳನ್ನು ಆಯೋಜಿಸಿದ್ದರು ಎಂಬ ಆರೋಪ ವಿರೇನ್ ಖನ್ನ ಮೇಲಿತ್ತು. ‘ಒಂದೇ ಆರೋಪದಲ್ಲಿ ಎರಡು ಎಫ್ಐಆರ್ ದಾಖಲಿಸಲಾಗಿದೆ. ಜಾಮೀನು ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದರು.
ತಲಾ ₹2 ಲಕ್ಷ ಮೌಲ್ಯದ ಬಾಂಡ್ ಜೊತೆಗೆ ಇಬ್ಬರ ಶ್ಯೂರಿಟಿ ನೀಡಬೇಕು ಎಂದು ನಿರ್ದೇಶಿಸಿದ ಪೀಠ, ಜಾಮೀನು ಮಂಜೂರು ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.