ADVERTISEMENT

ಚುನಾಯಿತಿ ಪ್ರತಿನಿಧಿಗಳ ಅವಧಿ ವಿಸ್ತರಣೆಗೆ ಹೈಕೋರ್ಟ್‌ ನಿರಾಕರಣೆ

ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 19:30 IST
Last Updated 10 ಆಗಸ್ಟ್ 2020, 19:30 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡತಾತ್ಕಾಲಿಕ ಸಮಿತಿ ನೇಮಿಸಲು ಹೈಕೋರ್ಟ್‌ ನಿರಾಕರಿಸಿದೆ.

ಮಂಡ್ಯ ಜಿಲ್ಲೆಯಬಿ.ಎಚ್. ನಾಗಣ್ಣ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಚುನಾಯಿತಿ ಪ್ರತಿನಿಧಿಗಳ ಅವಧಿ ವಿಸ್ತರಣೆ ಮಾಡಲು ಆಗುವುದಿಲ್ಲ’ ಎಂದು ತಿಳಿಸಿ ಅರ್ಜಿ ವಿಲೇವಾರಿ ಮಾಡಿತು.

‘ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡುವ ಮೂಲಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯನ್ನು ಸರ್ಕಾರ ಉಲ್ಲಂಘನೆ ಮಾಡಿದೆ’ ಎಂದು ಅರ್ಜಿದಾರರು ದೂರಿದರು.

ADVERTISEMENT

‘ಆಡಳಿತಾಧಿಕಾರಿಗಳ ನೇಮಕದ ಬಗ್ಗೆ ಪ್ರತ್ಯೇಕವಾಗಿಪ್ರಶ್ನಿಸಬಹುದೆ ಹೊರತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೂಲಕ ಅಲ್ಲ’ ಎಂದು ಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.