ADVERTISEMENT

ಬಳ್ಳಾರಿ ರಸ್ತೆ ವಿಸ್ತರಣೆ ವರದಿ ಕೇಳಿದ ಹೈಕೋರ್ಟ್

13 ವರ್ಷದಿಂದ ನನೆಗುದಿಯಲ್ಲಿರುವ ಕಾಮಗಾರಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 21:41 IST
Last Updated 24 ಜೂನ್ 2020, 21:41 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಗರದ ಬಳ್ಳಾರಿ ರಸ್ತೆ ವಿಸ್ತರಣೆ ಕಾಮಗಾರಿ ಕೈಗೊಳ್ಳದೇ ಇರುವುದನ್ನು ಪ್ರಶ್ನಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್‌) ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ‘ರಸ್ತೆ ವಿಸ್ತರಣೆ ಸ್ಥಿತಿಗತಿಯ ಬಗ್ಗೆ ವರದಿ ಸಲ್ಲಿಸಿ’ ಎಂದು ಪಾಲಿಕೆಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿದೆ.

‘ಬಳ್ಳಾರಿ ರಸ್ತೆ ವಿಸ್ತರಣೆಗೆ ಕೋರ್ಟ್ ಆದೇಶವಿದ್ದರೂ ಬಿಬಿಎಂಪಿ ಕಾಮಗಾರಿ ಕೈಗೊಳ್ಳುತ್ತಿಲ್ಲ. ಈ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗುತ್ತಿದ್ದು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್ ವಾದ ಮಂಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.