ADVERTISEMENT

ಆಸ್ಪತ್ರೆಗಳ ಮೇಲೆ ನಿಗಾ: ಅಫಿಡವಿಟ್ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 19:45 IST
Last Updated 9 ಸೆಪ್ಟೆಂಬರ್ 2020, 19:45 IST
ರಾಜ್ಯ ಹೈಕೋರ್ಟ್
ರಾಜ್ಯ ಹೈಕೋರ್ಟ್   

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ನಿಗಾ ಇಡಲು ರಾಜ್ಯ ಸರ್ಕಾರ ನೇಮಕ ಮಾಡಿರುವ ರಾಜ್ಯ ಮಟ್ಟದ ಸಮಿತಿಯ ಸದಸ್ಯ ಕಾರ್ಯದರ್ಶಿಯು ಅಫಿಡವಿಟ್ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

ವಕೀಲರ ಮೂಲಕ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದಕುಮಾರ್ ನೇತೃತ್ವದ ವಿಭಾಗೀಯ ಪೀಠ ತಿಳಿಸಿತು.

ಸುಪ್ರೀಂ ಕೋರ್ಟ್ ಆದೇಶದಂತೆ ರಚನೆಯಾಗಿರುವ ಸಮಿತಿಗೆಆಸ್ಪತ್ರೆಗಳಲ್ಲಿ ನೈರ್ಮಲ್ಯ,ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಸಾರಿಗೆ ಸೌಲಭ್ಯ, ಅಲ್ಲಿ ನೀಡುತ್ತಿರುವ ಆಹಾರದ ಗುಣಮಟ್ಟದ ಮೇಲ್ವಿಚಾರಣೆ ಜವಾಬ್ದಾರಿ ವಹಿಸಲಾಗಿದೆ. ಬಿಬಿಎಂಪಿ ಮಟ್ಟದ ಸಮಿತಿ ಮತ್ತು ಜಿಲ್ಲಾ ಮಟ್ಟದ ಸಮಿತಿಗಳ ಕಾರ್ಯ ವೈಖರಿ ಮೇಲ್ವಿಚಾರಣೆ ಮಾಡುವಂತೆ ರಾಜ್ಯ ಮಟ್ಟದ ಸಮಿತಿಗೆ ತಿಳಿಸಲಾಗಿದೆ.

ADVERTISEMENT

‘ರಾಜ್ಯ ಮಟ್ಟದ ಸಮಿತಿ ತನ್ನ ಕರ್ತವ್ಯ ನಿರ್ವಹಿಸಿದೆಯೇ ಎಂಬುದು ಪ್ರಶ್ನೆ. ಈವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು’ ಎಂದು ಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.