ADVERTISEMENT

ಪಾಲಿಕೆ ಮೀಸಲು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್‌ ಅರ್ಜ: ಸರ್ಕಾರಕ್ಕೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2022, 21:06 IST
Last Updated 25 ಆಗಸ್ಟ್ 2022, 21:06 IST

ಬೆಂಗಳೂರು: ಬಿಬಿಎಂಪಿ ವಾರ್ಡ್‌ವಾರು ಮೀಸಲಾತಿ ಅಂತಿಮಗೊಳಿಸಿ ನಗರಾ
ಭಿವೃದ್ಧಿ ಇಲಾಖೆ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಲು ಕೋರಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಕೆಯಾಗಿದೆ.

ಈಜಿಪುರದ ಕೆ.ಮಹದೇವ ಸಲ್ಲಿಸಿ
ರುವ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯ
ದರ್ಶಿ, ಬಿಬಿಎಂಪಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯ
ಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ
ಸೆ.1ಕ್ಕೆ ವಿಚಾರಣೆ ಮುಂದೂಡಿತು.

ADVERTISEMENT

ಇದೇ ವೇಳೆ ನ್ಯಾಯಪೀಠ, ‘ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿ
ದಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳ
‌ವಿಚಾರಣೆ ಇದೇ 26ರಂದು ನಡೆಯ
ಲಿದ್ದು, ಅಲ್ಲಿ ಯಾವ ತೀರ್ಮಾನ ಕೈಗೊಳ್ಳ
ಲಾಗುತ್ತದೆ ಎಂಬುದನ್ನು ಕಾದು ನೋಡೋಣ’ ಎಂದು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.