ADVERTISEMENT

ಬಿಬಿಎಂಪಿ ಕಾಯ್ದೆ ಪ್ರಶ್ನಿಸಿದ ಅರ್ಜಿ:ಹೈಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2023, 20:33 IST
Last Updated 3 ಮಾರ್ಚ್ 2023, 20:33 IST
   

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾಯ್ದೆ–2020ರ ವಿವಿಧ ಕಲಂಗಳನ್ನು ಪ್ರಶ್ನಿಸಲಾದ ರಿಟ್‌ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ, ‘ಸಿಟಿಜನ್ ಆ್ಯಕ್ಷನ್ ಫೋರಂ’ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೆ ಆದೇಶಿಸಿತು. ವಿಚಾರಣೆಯನ್ನು ಮುಂದೂಡಲಾಗಿದೆ.

ಆಕ್ಷೇಪವೇನು?: ‘ಬಿಬಿಎಂಪಿ ಕಾಯ್ದೆ– 2020ರ ಕಲಂಗಳಾದ 75, 76, 77, 78, 79 ಮತ್ತು 86 ಸಂವಿಧಾನದ ಮೂಲ ಆಶಯಗಳನ್ನು ಉಲ್ಲಂಘಿಸಿವೆ. ಹೀಗಾಗಿ ಕಾಯ್ದೆಯನ್ನು ರದ್ದುಗೊಳಿಸಬೇಕು’ ಎಂಬುದು ಅರ್ಜಿದಾರರ ಆಕ್ಷೇಪ.

ADVERTISEMENT

‘ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ರಚನೆ ಮಾಡಿರುವ ಕ್ಷೇತ್ರ ಸಮಾಲೋಚನಾ ಸಮಿತಿ ಮತ್ತು ವಲಯ ಸಮಿತಿಗಳು ಸಂವಿಧಾನದ ಅಡಿಯಲ್ಲಿ ರಚಿಸಲಾಗಿರುವ ವಾರ್ಡ್ ಸಮಿತಿಗೆ ನೀಡಿರುವ ಅಧಿಕಾರವನ್ನು ಹೊಸ ಕಾಯ್ದೆಯು ಕಿತ್ತುಕೊಳ್ಳಲಿದೆ’ ಎಂದು ಅರ್ಜಿದಾರರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.