
ಪ್ರಜಾವಾಣಿ ವಾರ್ತೆ
ಬೆಂಗಳೂರು: ಹೈಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳ ವಿರುದ್ಧ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದರ್ಶನ್ ಅಡ್ಯಂತಾಯ, ಅರ್ಜುನ್ ಅಡ್ಯಂತಾಯ, ಲವಿನಾ ಜಾನೆಟ್, ಜೈಸನ್ ಡಿಸೋಜ, ಮಹೇಂದ್ರ ಕಾಂಚನ್, ಪಿ.ಪಿ.ರಾಕೇಶ್, ನೆಲ್ಸನ್ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಉದ್ಯೋಗಕ್ಕೆ ಸಂಬಂಧಿಸಿದಂತೆ ಸುಮಿತ್ ಕುಮಾರ್, ಶಿವಕುಮಾರ್ ತಲಾ ₹8 ಲಕ್ಷ, ಮಹಿತಾ ₹11 ಲಕ್ಷ, ಹರ್ಷಾ ₹15 ಲಕ್ಷ, ಹರ್ಷಿತಾ ಶ್ರೀನಿವಾಸ್ ₹ 13 ಲಕ್ಷವನ್ನು ಆರೋಪಿಗಳಿಗೆ ನೀಡಿದ್ದರು. ಒಟ್ಟು ₹ 55 ಲಕ್ಷ ಪಡೆದು ಆರೋಪಿಗಳು ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ. ಇದೇ ಪ್ರಕರಣದ ತನಿಖೆಯನ್ನು ಸಿಸಿಬಿಯೂ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.