ಕರ್ನಾಟಕ ಹೈಕೋರ್ಟ್
ಬೆಂಗಳೂರು: ‘ಸಾರ್ವಜನಿಕರ ಬಳಕೆಗಾಗಿ ಮೀಸಲಿಟ್ಟು ಅಭಿವೃದ್ಧಿ ಪಡಿಸಲಾದ ನಾಗರಿಕ ಸೌಲಭ್ಯದ (ಸಿ.ಎ) ನಿವೇಶನಗಳನ್ನು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಪ್ರದೇಶ (ಕೆಐಎಡಿಬಿ) ಕಾನೂನು ಬಾಹಿರವಾಗಿ ಖಾಸಗಿ ವ್ಯಕ್ತಿಗಳಿಗೆ ಹಂಚಿಕೆ ಮಾಡಿದೆ’ ಎಂದು ಆಕ್ಷೇಪಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.
ಈ ಸಂಬಂಧ ದಿನೇಶ್ ಕಲ್ಲಹಳ್ಳಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ಆಲಿಸಿದ ನ್ಯಾಯಪೀಠ, ‘ಅರ್ಜಿದಾರರಿಗೆ ಇದರಿಂದ ವೈಯಕ್ತಿಕ ಸಮಸ್ಯೆ ಏನಾಗಿದೆ’ ಎಂದು ಪ್ರಶ್ನಿಸಿತಲ್ಲದೆ, ‘ಇದೊಂದು ಸಾರ್ವಜನಿಕ ಹಿತಾಸಕ್ತಿ ವಿಚಾರ ಒಳಗೊಂಡ ಅರ್ಜಿಯಾಗಿದ್ದು ಪರಿಹಾರ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಬಹುದು’ ಎಂದು ಸೂಚಿಸಿ ವಿಲೇವಾರಿ ಮಾಡಿತು.
ಕೋರಿಕೆ: ‘ಸಿ.ಎ ನಿವೇಶನಗಳನ್ನು ಕೆಐಎಡಿಬಿ ಖಾಸಗಿ ವ್ಯಕ್ತಿಗಳಿಗೆ ಹಂಚಿಕೆ ಮಾಡುತ್ತಿರುವುದನ್ನು ಆಕ್ಷೇಪಿಸಲಾಗಿರುವ ಮನವಿಯನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.