ಹೈಕೋರ್ಟ್
ಬೆಂಗಳೂರು: ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಉದ್ಯಾನದ ಜಮೀನನ್ನು ಅನ್ಯ ಉದ್ದೇಶಕ್ಕೆ ಪರಭಾರೆ ಮಾಡಿದ ಪ್ರಕರಣದಲ್ಲಿ ವಿಚಾರಣೆಗೆ ಹಲವು ಬಾರಿ ಗೈರುಹಾಜರಾದ ಬೆಂಗಳೂರು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ವಿರುದ್ಧ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಸಮನ್ಸ್ ಜಾರಿ ಮಾಡಿದ್ದಾರೆ.
ದೊಡ್ಡಗುಬ್ಬಿ ಗ್ರಾಮದ ಸರ್ವೆ ಸಂಖ್ಯೆ 106ರಲ್ಲಿನ 3 ಎಕರೆ 16 ಗುಂಟೆ ಜಮೀನನ್ನು ಉದ್ಯಾನದ ಉದ್ದೇಶಕ್ಕೆ ಮಾತ್ರವೇ ಬಳಸಬೇಕು ಎಂದು ಹೈಕೋರ್ಟ್ 2010ರಲ್ಲಿ ಆದೇಶಿಸಿತ್ತು. ಅದನ್ನು ಉಲ್ಲಂಘಿಸಿ ಗ್ರಾಮ ಪಂಚಾಯತಿ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡಲಾಗಿದೆ. ಇದರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು.
ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯಕ್ತರು ಜಿಲ್ಲಾಧಿಕಾರಿಗೆ ಹಲವು ಬಾರಿ ಸೂಚಿಸಿದ್ದರು. ಆದರೆ ಜಿಲ್ಲಾಧಿಕಾರಿ ಒಮ್ಮೆಯೂ ವಿಚಾರಣೆಗೆ ಹಾಜರಾಗಿಲ್ಲ. ಜುಲೈ 31ರಂದು ನಡೆದ ವಿಚಾರಣೆಗೂ ಗೈರಾಗಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಲೋಕಾಯುಕ್ತರು, ‘ಸೆಪ್ಟೆಂಬರ್ 3ರಂದು ನಡೆಯಲಿರುವ ವಿಚಾರಣೆಗೆ ಹಾಜರಾಗಿ. ಇಲ್ಲವೇ ವಾರಂಟ್ ಜಾರಿ ಮಾಡಬೇಕಾಗುತ್ತದೆ’ ಎಂದು ಸಮನ್ಸ್ ಹೊರಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.