ADVERTISEMENT

ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 20 ಜನವರಿ 2021, 18:34 IST
Last Updated 20 ಜನವರಿ 2021, 18:34 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: 2018ರ ವಿಧಾನಸಭಾ ಚುನಾವಣೆ ಸಮಯದಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಸತಿ ಸಮುಚ್ಚಯವೊಂದರಲ್ಲಿ ಭಾರಿ ಪ್ರಮಾಣದಲ್ಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾದ ಪ‍್ರಕರಣದಲ್ಲಿ ಶಾಸಕ ಮುನಿರತ್ನ ವಿರುದ್ಧ ಸಿಬಿಐ ತನಿಖೆ ನಡೆಸಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.

‘ಹಗರಣಕ್ಕೆ ಸಂಬಂಧಿಸಿದ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತರು(ಪೂರ್ವ) ಸಲ್ಲಿಸಿದ್ದ ವರದಿ ಅವಲೋಕಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿಗಳನ್ನು ವಿಲೇವಾರಿ ಮಾಡಿತು.

‘ಈ ವರದಿ ಗಮನಿಸಿದರೆ ಸಿಬಿಐಗೆ ಪ್ರಕರಣ ವರ್ಗಾಯಿಸಬೇಕಾದ ಅಗತ್ಯತೆ ಕಾಣಿಸುತ್ತಿಲ್ಲ’ ಎಂದು ಪೀಠ ಹೇಳಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.