ADVERTISEMENT

ನೀರು ಹರಿಸುವ ಬಗ್ಗೆ ನೆರೆ ರಾಜ್ಯಗಳಿಗೆ ಮಾಹಿತಿ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 19:30 IST
Last Updated 10 ಆಗಸ್ಟ್ 2020, 19:30 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ಜಲಾಶಯಗಳಿಂದ ನದಿಗೆ ನೀರು ಹರಿಸುವ ಬಗ್ಗೆ ನೆರೆ ರಾಜ್ಯಗಳಿಗೆ ಮುಂಚಿತವಾಗಿಯೇ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೇಂದ್ರ ಜಲಶಕ್ತಿ ಸಚಿವಾಲಯ ಹೈಕೋರ್ಟ್‌ಗೆ ಮೆಮೊ ಸಲ್ಲಿಸಿದ್ದು, ‘ಪ್ರವಾಹ ಪರಿಸ್ಥಿತಿ ಎದುರಾಗುವ ಸಂದರ್ಭ ಇದ್ದರೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಅಕ್ಕ–ಪಕ್ಕದ ರಾಜ್ಯಗಳಿಗೆ ಅನುಕೂಲ ಆಗುವಂತೆ ಮುನ್ನೆಚ್ಚರಿಕೆ ನೀಡಬೇಕು ಎಂದೂ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ನಿರ್ದೇಶನ ನೀಡಿದೆ’ ಎಂದು ವಿವರಿಸಿದೆ.

‘ನೀರು ಹರಿಬಿಡುವ ಬಗ್ಗೆ ನೆರೆ ರಾಜ್ಯಗಳಿಗೆ ಮಾಹಿತಿ ನೀಡಲು ಸರಳ ವಿಧಾನವನ್ನು ಕಂಡುಕೊಳ್ಳಬೇಕು’ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಹಿಂದಿನ ವಿಚಾರಣೆ ವೇಳೆ ತಿಳಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.