ADVERTISEMENT

ಆದೇಶ ಕಾಯ್ದಿರಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 20:22 IST
Last Updated 10 ಜನವರಿ 2019, 20:22 IST
   

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ನಿಗದಿಗೊಳಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದನ್ನು ಪ್ರಶ್ನಿಸಿದ 30ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ಮುಕ್ತಾಯಗೊಳಿಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ನ್ಯಾಯಮೂರ್ತಿ ಎಸ್.ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ಪೂರೈಸಿ, ಆದೇಶ ಕಾಯ್ದಿರಿಸಿರುವುದಾಗಿ ಪ್ರಕಟಿಸಿದೆ.

ಇದೇ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಾಜರಾಗಿದ್ದ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು, ‘ಆರು ಮಹಾನಗರ ಪಾಲಿಕೆಗಳೂ ಸೇರಿದಂತೆ 101 ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿಯನ್ನು 2019ರ ಜನವರಿ 16ರವರೆಗೆ ಪ್ರಕಟಿಸುವುದಿಲ್ಲ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ADVERTISEMENT

ರಾಜ್ಯದಾದ್ಯಂತ 26 ಜಿಲ್ಲೆಗಳಲ್ಲಿನ 2,593 ಸ್ಥಳೀಯ ಸಂಸ್ಥೆಯ ವಾರ್ಡುಗಳಿಗೆ 2019ರ ಮಾರ್ಚ್‌ನಲ್ಲಿ ಅಧಿಕಾರ ಅವಧಿ ‍ಪೂರ್ಣಗೊಳ್ಳುತ್ತಿದ್ದು, ಚುನಾವಣೆ ನಡೆಸಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.