ADVERTISEMENT

ಸಿಗರೇಟ್ ವ್ಯಾಪಾರಿಗಳಿಂದ ಹಣ ಸುಲಿಗೆ ಆರೋಪ: ಹೈಕೋರ್ಟ್ ಮೆಟ್ಟಿಲೇರಿದ ಪ್ರಭುಶಂಕರ್

​ಪ್ರಜಾವಾಣಿ ವಾರ್ತೆ
Published 29 ಮೇ 2020, 16:26 IST
Last Updated 29 ಮೇ 2020, 16:26 IST
   

ಬೆಂಗಳೂರು: ಸಿಗರೇಟ್ ವ್ಯಾಪಾರಿಗಳಿಂದ ಹಣ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎರಡು ಪ್ರತ್ಯೇಕ ಎಫ್‌ಐಆರ್ಗಳನ್ನು ರದ್ದುಪಡಿಸಬೇಕು' ಎಂದು ಕೋರಿ ಸಿಸಿಬಿಯ ಎಸಿಪಿಯಾಗಿದ್ದ ಪ್ರಭುಶಂಕರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಗಳನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಕಾಟನ್ ಪೇಟೆ ಠಾಣಾ ಪೊಲೀಸರು, ಸಿಸಿಬಿ ಮತ್ತು ಪ್ರಕರಣದ ದೂರುದಾರ ಶಾಜಿ ಜಾರ್ಜ್ ಥಾಮಸ್ ಹಾಗೂ ಆದಿಲ್ ಅಜೀಜ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.

ADVERTISEMENT

ವಿಚಾರಣೆಯನ್ನು ಜೂನ್ 3ಕ್ಕೆ ಮುಂದೂಡಲಾಗಿದೆ.ಅರ್ಜಿದಾರರು ಪರ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಹಾಜರಾಗಿದ್ದರು.

ಲಾಕ್‌ಡೌನ್ ಅವಧಿಯಲ್ಲಿ ಅಕ್ರಮವಾಗಿ ಸಿಗರೇಟ್ ಮಾರಾಟಕ್ಕೆ ನೆರವು ನೀಡುವುದಾಗಿ ತಿಳಿಸಿ ವ್ಯಾಪಾರಿಗಳಿಂದ ₹ 62.5 ಲಕ್ಷ ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿದ್ದಾರೆ.

ಸಿಸಿಬಿ ಎಸಿಪಿಯಾಗಿದ್ದ ಪ್ರಭುಶಂಕರ್ ವಿರುದ್ಧ ಕಾಟನ್‌ಪೇಟೆ ಠಾಣಾ ಪೊಲೀಸರು ಮೇ 7ರಂದು ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.