ಬೆಂಗಳೂರು: ರಾಜ್ಯ ಸರ್ಕಾರಜೂನ್ 30ರಂದು ಹೊರಡಿಸಿರುವಕರ್ನಾಟಕ ಕೈಗಾರಿಕಾ ಉದ್ಯೋಗ ನಿಯಮಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನುಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
‘ಕೈಗಾರಿಕಾ ಉದ್ಯೋಗ ಕಾಯ್ದೆ ಪ್ರಕಾರಯಾವುದೇ ನಿಯಮ ರೂಪಿಸುವಾಗ ಅಥವಾ ತಿದ್ದುಪಡಿ ತರುವಾಗ ಕಾರ್ಮಿಕಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿಲ್ಲ. ಕಾಯಂ ನೌಕರರು ಮತ್ತು ಗುತ್ತಿಗೆ ಆಧಾರದ ನೌಕರರಿಗೆ ಇರುವ ಸೌಲಭ್ಯಗಳಲ್ಲಿ ವ್ಯತ್ಯಾಸವಿದೆ’ ಎಂದು ಕರ್ನಾಟಕ ಕೈಗಾರಿಕೆ ಮತ್ತು ಇತರ ಉದ್ಯಮಗಳ ನೌಕರರ ಒಕ್ಕೂಟ ಅರ್ಜಿ ಸಲ್ಲಿಸಿತ್ತು.
‘ಪ್ರತ್ಯೇಕ ವರ್ಗದ ಕಾರ್ಮಿಕರ ವೇತನ, ಕೆಲಸದ ಸಮಯ ಮತ್ತು ಇತರ ಷರತ್ತುಗಳು ಸಾಮಾನ್ಯ ಉದ್ಯೋಗಿಗಳಿಗೆ ಸಮನಾಗಿವೆ’ ಎಂದು ಪೀಠ ಹೇಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.