ADVERTISEMENT

ಸಿಂಧೂರಿ ನೇಮಕ ಪ್ರಶ್ನಿಸಿದ್ದ ಅರ್ಜಿ: ಹೈಕೋರ್ಟ್‌ ನೋಟಿಸ್

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 18:23 IST
Last Updated 7 ಜೂನ್ 2021, 18:23 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡಿದ್ದ ಅರ್ಜಿ ಮರು ಪರಿಶೀಲಿಸಲು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೀಡಿದ್ದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿ ಆಧರಿಸಿ ಐಎಎಸ್ ಅಧಿಕಾರಿ ಬಿ.ಶರತ್ ಅವರಿಗೆ ನೋಟಿಸ್ ಜಾರಿ ಮಾಡಲುಹೈಕೋರ್ಟ್ಆದೇಶಿಸಿದೆ.

‘ರೋಹಿಣಿ ಸಿಂಧೂರಿ ಅವರನ್ನು ಬೇರೆ ಹುದ್ದೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ’ ಎಂದು ಸರ್ಕಾರದ ಪರ ವಕೀಲರುನ್ಯಾಯಮೂರ್ತಿ ಅರವಿಂದಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠದ ಗಮನಕ್ಕೆ ತಂದರು.

ಇದನ್ನು ಪರಿಗಣಿಸಿದ ಪೀಠ, ಅರ್ಜಿಯಲ್ಲಿ ಪ್ರತಿವಾದಿ ಆಗಿರುವ ಬಿ.ಶರತ್ ಅವರಿಗೆ ನೋಟಿಸ್ ಜಾರಿ ಮಾಡಲು ತಿಳಿಸಿ ವಿಚಾರಣೆಯನ್ನು ಜೂ.14ಕ್ಕೆ ಮುಂದೂಡಿತು. ಸಿಎಟಿ ಆದೇಶ ಪ್ರಶ್ನಿಸಿ ಶರತ್ ಅವರು ಕೂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಎರಡು ಅರ್ಜಿಗಳನ್ನು ಪೀಠ ಒಟ್ಟಿಗೆ ವಿಚಾರಣೆ ನಡೆಸುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.