ADVERTISEMENT

ಕಬ್ಬನ್ ಉದ್ಯಾನದಲ್ಲಿ ಸಂಚಾರ: ಹೈಕೋರ್ಟ್‌ ನೋಟಿಸ್

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 21:35 IST
Last Updated 13 ಅಕ್ಟೋಬರ್ 2020, 21:35 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ವಾಹನ ಸಂಚಾರ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲುಹೈಕೋರ್ಟ್ ಆದೇಶಿಸಿದೆ.

ಕಬ್ಬನ್ ಪಾರ್ಕ್ ಪಾದಚಾರಿಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎನ್.ಎಸ್. ಸಂಜಯಗೌಡ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

‘ಉದ್ಯಾನದೊಳಗೆ ವಾಹನ ಸಂಚಾರ ಮತ್ತು ವಾಹನ ನಿಲುಗಡೆಗೆ ಅವಕಾಶ ನೀಡದಂತೆ ನಗರಾಭಿವೃದ್ಧಿ ಇಲಾಖೆ ಮತ್ತು ನಗರ ಭೂಸಾರಿಗೆ ನಿರ್ದೇಶನಾಲಯ ಸೆ‍‍ಪ್ಟೆಂಬರ್‌ 2ರಂದು ಶಿಫಾರಸು ಮಾಡಿವೆ. ಗೃಹ ಇಲಾಖೆ ಅವಸರದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ’ ಎಂದು ಅರ್ಜಿದಾರರು ಹೇಳಿದ್ದಾರೆ.

ADVERTISEMENT

‘ಲಾಕ್‌ಡೌನ್ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಇದ್ದ ಕಾರಣ ಕಬ್ಬನ್ ಪಾರ್ಕ್‌ನಲ್ಲಿ ಗಾಳಿ ಶುದ್ಧವಾಗಿದೆ. ಈ ನಡುವೆ ವಾಹನ ಸಂಚಾರಕ್ಕೆ ಅನುಮತಿ ನೀಡುವಂತೆ ಗೃಹ ಇಲಾಖೆ ಕಾರ್ಯದರ್ಶಿ ಅವರು ರಾಜ್ಯ ಸರ್ಕಾರವನ್ನು ಕೋರಿದ್ದಾರೆ. ಅವಕಾಶ ನಿರಾಕರಿಸಿ ನಗರಾಭಿವೃದ್ಧಿ ಇಲಾಖೆಯ ಶಿಫಾರಸು ಅನುಷ್ಠಾನಗೊಳಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.