ADVERTISEMENT

ಕೆಲಸದ ಅವಧಿ ಹೆಚ್ಚಳ: ನೋಟಿಸ್

​ಪ್ರಜಾವಾಣಿ ವಾರ್ತೆ
Published 29 ಮೇ 2020, 18:45 IST
Last Updated 29 ಮೇ 2020, 18:45 IST
   

ಬೆಂಗಳೂರು:ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ಮಾಡಿರುವುದನ್ನು ಪ್ರಶ್ನಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತು ಬೆಂಗಳೂರಿನ ದೀಪಾಂಜಲಿ ನಗರದ ನಿವಾಸಿ ಎಚ್. ಮಾರುತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ .ಎಸ್. ಓಕಾನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಪ್ರತಿವಾದಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೆ ಆದೇಶಿಸಲಾಗಿದೆ.

ADVERTISEMENT

'ಕೆಲಸದ ಅವಧಿ ಹೆಚ್ಚಿಸುವ ತುರ್ತು ಏನಿತ್ತು, ಹೆಚ್ಚುವರಿ ಕೆಲಸದ ಅವಧಿಗೆ ಹೆಚ್ಚುವರಿ ವೇತನ ನೀಡಲಾಗುತ್ತದೆಯೇ, ಕಾರ್ಖಾನೆಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಕೈಗೊಂಡಿರುವ ಸುರಕ್ಷತಾ ಕ್ರಮಗಳೇನು ಎಂಬ ಅಂಶಗಳ ಬಗ್ಗೆ ವಿವರಣೆ ನೀಡಿ' ಎಂದು ಸರ್ಕಾರಕ್ಕೆ ಸೂಚಿಸಲಾಗಿದೆ.

ಜೂನ್ 5ಕ್ಕೆ ವಿಚಾರಣೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.