ADVERTISEMENT

ಕ್ರಿಮಿನಲ್ ಪ್ರಕರಣ: ಸ್ವಯಂ ಪ್ರೇರಿತ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 22:01 IST
Last Updated 21 ಸೆಪ್ಟೆಂಬರ್ 2020, 22:01 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್ತಿನ ಸದಸ್ಯರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಲು ರಿಜಿಸ್ಟ್ರಾರ್ ಜನರಲ್ ಅವರಿಗೆ ಹೈಕೋರ್ಟ್‌ ಆದೇಶಿಸಿದೆ.

ನ್ಯಾಯಾಲಯಕ್ಕೆ ಸಹಾಯ ಮಾಡಲು ಹಿರಿಯ ವಕೀಲ ಆದಿತ್ಯ ಸೋಂಧಿ ಅವರನ್ನು ಅಮಿಕಸ್‌ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವ ವಕೀಲರು) ಆಗಿಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನೇಮಿಸಿತು. ರಾಜ್ಯ ಸರ್ಕಾರವನ್ನು ಅಡ್ವೊಕೇಟ್ ಜನರಲ್ ಅಥವಾ ಹೆಚ್ಚುವರಿ ಅಡ್ವೊಕೇಟ್ ಜನರಲ್‌ ಪ್ರತಿನಿಧಿಸಲಿದ್ದಾರೆ ಎಂದು ಪೀಠ ಹೇಳಿತು.

ಅಶ್ವಿನಿ ಕುಮಾರ್ ಉಪಾಧ್ಯಾಯ ಪ್ರಕರಣದ ವಿಚಾರಣೆ ವೇಳೆ ಬಾಕಿ ಇರುವ ಎಲ್ಲ ಕ್ರಿಮಿನಲ್ ಪ್ರಕರಣಗಳ ಕುರಿತು ಕೂಡಲೇ ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಿಗೆ ಸುಪ್ರೀಂ ಕೋರ್ಟ್‌ ತಿಳಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.